– ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ
ಬೀದರ್: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ರೈತರು ಏಕಾಏಕಿ ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಯತ್ನಿಸಿದ ಘಟನೆ ಜನವಾಡ ಬಳಿ ನಡೆದಿದೆ.
Advertisement
Advertisement
ತಾಲೂಕಿನ ಜನವಾಡ ಗ್ರಾಮದ ಬಳಿ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಹಾಗೂ ತಮಟೆ ಬಾರಿಸುತ್ತಾ ರೈತರು ಪ್ರತಿಭಟನೆ ಮಾಡುತ್ತಿದ್ದರು. ಇದೇ ವೇಳೆ ಕಬ್ಬಿಗೆ ಬೆಂಬಲ ನೀಡುವಂತೆ ಆಗ್ರಹಿಸಿ ನೂರಾರು ರೈತರು, ದಿಢೀರ್ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಬೀಗ ಹಾಕಲು ಯತ್ನಿಸಿದ್ದಾರೆ. ಈ ವೇಳೆ ರೈತರ ಕೈಯಲ್ಲಿದ್ದ ಬೀಗವನ್ನು ಸ್ಥಳದಲ್ಲಿದ್ದ ಪೆÇಲೀಸರು ಕಸಿದುಕೊಂಡು ಬೀಗ ಹಾಕುವುದನ್ನು ತಡೆದಿದ್ದಾರೆ. ಇದನ್ನೂ ಓದಿ: ಭಾರತ್ ಬಂದ್: 100ಕ್ಕೂ ಹೆಚ್ಚು ರೈತರ ಬಂಧನ, ಬಿಡುಗಡೆ
Advertisement
Advertisement
ಮೂರು ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿದ್ದು, ಈ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಈ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾನಿರತ ರೈತರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ನಿದ್ರೆ – ಉಳಿದವರು ಮೊಬೈಲ್‍ನಲ್ಲಿ ಮಗ್ನ
ನಂತರ ಕೃಷಿ ಕಾಯ್ದೆ ವಿರೋಧಿ ರೈತ ಪರ, ದಲಿತ ಪರ, ಕನ್ನಡ ಪರ ಹಾಗೂ ಕಾರ್ಮಿಕ ಸಂಘಟನೆಗಳು ನಗರದ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.