– ಬ್ಯಾರಿಕೇಡ್, ತಂತಿಗಳಿಂದ ಗಡಿಭಾಗಗಳು ಬಂದ್, ಸೆಕ್ಷನ್ 144 ಜಾರಿ
ನವದೆಹಲಿ: ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿಯಾಗಬೇಕು, ಸ್ವಾಮಿನಾಥನ್ ವರದಿ ಜಾರಿಯಾಗಬೇಕು, ರೈತರಿಗೆ ಪಿಂಚಣಿ ಸೌಲಭ್ಯ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ರೈತರು (Farmers) ದೆಹಲಿಯಲ್ಲಿ ಮತ್ತೊಮ್ಮೆ ಐತಿಹಾಸಿಕ ಪ್ರತಿಭಟನೆ ನಡೆಸಲು ತಿರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ.13 (ಇಂದು) ʻದೆಹಲಿ ಚಲೋʼಗೆ (Delhi Chalo) ಪಂಜಾಬ್ ಮತ್ತು ಹರಿಯಾಣ ರೈತರು ʻದೆಹಲಿ ಚಲೋʼಗೆ ಕರೆ ನೀಡಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಪಂಜಾಬ್, ಹರಿಯಾಣ, ಉತ್ತರಪ್ರದೇಶದಿಂದಲೂ ರೈತರು ದೆಹಲಿಗೆ ಪ್ರವೇಶಿಸಲಿದ್ದಾರೆ. ಕರ್ನಾಟಕದಿಂದಲೂ ರೈತ ಮುಖಂಡ ಕುರುಬೂರು ಶಾಂತಕುಮಾರ್ ಭಾಗಿಯಾಗಲಿದ್ದಾರೆ. ಈ ರೈತ ಹೋರಾಟದಲ್ಲಿ ಸುಮಾರು 200 ಸಂಘಟನೆಗಳಿಂದ 25,000 ರೈತರು ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಇದನ್ನೂ ಓದಿ: 1,078 ತಂಡಗಳು, 16,100 ಆಟಗಾರರು – ಮೋದಿ ತವರಲ್ಲಿ ʻಲೋಕಸಭಾ ಪ್ರೀಮಿಯರ್ ಲೀಗ್ʼಗೆ ಚಾಲನೆ
Advertisement
Advertisement
ಅಧಿಕ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳುವುದರಿಂದ ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಪೊಲೀಸರು (Delhi Police) ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಜೊತೆಗೆ ರಾಜಧಾನಿಯಲ್ಲಿ ಎಲ್ಲಾ ರೀತಿಯ ರ‍್ಯಾಲಿ, ಮೆರವಣಿಗೆ, ರಸ್ತೆ ಮಾರ್ಗಗಳನ್ನ ನಿರ್ಬಂಧಿಸಲಾಗಿದೆ. ಟ್ಯಾಕ್ಟರ್‌ಗಳಲ್ಲಿ ಜನರನ್ನು ತುಂಬಿಕೊಂಡು ಹೋಗುವುದಕ್ಕೂ ನಿಷೇಧ ಹೇರಲಾಗಿದೆ. ಮಾರ್ಚ್ 12ರ ವರೆಗೂ ಈ ಕ್ರಮ ಇದೇ ರೀತಿ ಮುಂದುವರಿಯಲಿದೆ. ಸಿಂಘು, ಘಾಜಿಪುರ, ಟಿಕ್ರಿ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಭಾರೀ ಭದ್ರತೆ:
ಪ್ರತಿಭಟನೆ ತಡೆಯಲು ಭದ್ರತೆಗೆ 11 ಪ್ಯಾರಾ ಮಿಲಿಟರಿ ತುಕಡಿಗಳನ್ನ ನಿಯೋಜನೆ ಮಾಡಲಾಗಿದೆ. 5,000ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ. ಇದರೊಂದಿಗೆ ತಂತಿಗಳಿಂದ ಹಾಗೂ ಬ್ಯಾರಿಕೇಡ್‌ಗಳಿಂದ ಗಡಿ ರಸ್ತೆಗಳನ್ನ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಮಾಜಿ ಸಿಎಂ ಅಶೋಕ್ ಚವಾಣ್ ಗುಡ್ ಬೈ- ಲೋಕಸಭೆ ಹೊಸ್ತಿಲಲ್ಲಿ ಮಹಾರಾಷ್ಟ್ರದಲ್ಲಿ ಕೈಗೆ ಹಿನ್ನಡೆ
Advertisement
ರೈತರೊಂದಿಗೆ ಅಮಾನವೀಯ ವರ್ತನೆ ಆರೋಪ:
ಇನ್ನೂ ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ಆಗಮಿಸುತ್ತಿದ್ದ ರೈತರು, ರೈತ ಮಹಿಳೆಯರ ಮೇಲೆ ಮಧ್ಯಪ್ರದೇಶದ ಪೊಲೀಸರು ಬಲವಂತವಾಗಿ ಬೆದರಿಸಿ ದಬ್ಬಾಳಿಕೆ ನಡೆಸಿದ್ದಾರೆ. ಮಹಿಳೆಯರನ್ನು ಎಳೆದಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ರೈತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನೂ ಕೊಡಿಸದೇ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ. ಇದನ್ನೂ ಓದಿ: ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಐದು ಮಂದಿ ಸಜೀವ ದಹನ
ಅಲ್ಲದೇ ಪ್ರತಿಭಟನೆಗೆ ತೆರಳುತ್ತಿದ್ದ ಬೆಳಗಾವಿ ಜಿಲ್ಲೆಯ ಗುರುಸಿದ್ದಪ್ಪ, ಧಾರವಾಡ ಜಿಲ್ಲೆಯ ಪರಶುರಾಮ್, ಚಾಮರಾಜನಗರ ಜಿಲ್ಲೆಯ ಪಟೇಲ್ ಶಿವಮೂರ್ತಿ, ಮೂಕಳ್ಳಿ ಮಾದೇವಸ್ವಾಮಿ, ಹಾಸನ ಜಿಲ್ಲೆಯ ಧರ್ಮರಾಜ್, ಮೈಸೂರು ಜಿಲ್ಲೆಯ ಬರಡನಪುರ ನಾಗರಾಜ್, ಮಹೇಶ್, ಉಡಿಗಾಲ ರೇವಣ್ಣ, ಕುರುಬೂರು ಸಿದ್ದೇಶ್, ಗುರುಸ್ವಾಮಿ, ಗೌರಿಶಂಕರ್,ಕಮಲಮ್ಮ, ಪ್ರೇಮ, ಮಮತಾ, ಶ್ವೇತಾ, ನಾಗವೇಣಿ, ಪ್ರದೀಪ್ ಕುರುಬೂರು,. ಮಂಜೇಶ್ ಸೇರಿ ನೂರಕ್ಕೂ ಅಧಿಕ ರೈತರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಶಾಂತಕುಮಾರ್ ದೂರಿದ್ದಾರೆ.