ಚಿಕ್ಕೋಡಿ: ಜಿಲ್ಲೆಯ ಅಥಣಿ ತಾಲೂಕಿನ ಉಗಾರ ಪಟ್ಟಣದಲ್ಲಿ ಶನಿವಾರ ರೈತರು ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಗೆ ಬೆಂಕಿ ಇಟ್ಟು ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಥಣಿ ತಾಲೂಕಿನ ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಹಣವನ್ನು ರೈತರಿಗೆ ಕೊಡಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು. ಕಬ್ಬು ಬೆಳೆಗಾರರಿಗೆ ಅಥಣಿಯ 4 ಸಕ್ಕರೆ ಕಾರ್ಖಾನೆಗಳಿಂದ ಬಿಲ್ ಬಾಕಿ ಸಂದಾಯವಾಗಿಲ್ಲ. ಇದರಿಂದ ರೊಚ್ಚಿಗೆದ್ದ ರೈತರು ಕಬ್ಬು ತುಂಬಿದ್ದ ಟ್ರ್ಯಾಕ್ಟರ್‍ಗೆ ಬೆಂಕಿ ಇಟ್ಟಿದ್ದಾರೆ. ಕಾರ್ಖಾನೆ ಮಾಲೀಕರು ಬಾಕಿ ಬಿಲ್ ಹಣವನ್ನು ರೈತರಿಗೆ ಸಂದಾಯ ಮಾಡುವವರೆಗೂ ಕಬ್ಬನ್ನು ಸಕ್ಕರೆ ಕಾರ್ಖಾನೆಗಳಿಗೆ ಕಳಿಸೊಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.
Advertisement
Advertisement
ಅಷ್ಟೇ ಅಲ್ಲದೆ ಶನಿವಾರದಂದು ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿ ಟ್ರ್ಯಾಕ್ಟರ್‍ನಲ್ಲಿದ್ದ ಕಬ್ಬಿಗೆ ಬೆಂಕಿ ಇಟ್ಟು, ಟ್ರ್ಯಾಕ್ಟರ್‍ರನ್ನು ಪಲ್ಟಿ ಮಾಡಿದ್ದಾರೆ. ಈ ಘಟನೆ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews