ಚಾಮರಾಜನಗರ: ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಮಗುಚಿಕೊಂಡು ವ್ಯಕ್ತಿಯೋರ್ವ ಮೃತಪಟ್ಟಿರುವ ದಾರುಣ ಘಟನೆ ಚಾಮರಾಜನಗರದಲ್ಲಿ (Chamarajanagara) ನಡೆದಿದೆ.
ತಾಲೂಕಿನ ಕೊತ್ತಲವಾಡಿ (Kottalavadi) ಗ್ರಾಮದ ಶಿವಕುಮಾರ್ (30) ಮೃತಪಟ್ಟ ದುರ್ದೈವಿ. ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ತಕ್ಷಣವೇ ಚಿಕಿತ್ಸೆಗಾಗಿ ತೆರಕಣಾಂಬಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿದ್ದ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಕಿಡ್ನ್ಯಾಪ್ ಕಥೆ ಕಟ್ಟಿದ್ಳು – ಬಾಲಕಿ ಮಾಸ್ಟರ್ಮೈಂಡ್ಗೆ ಪೊಲೀಸರೇ ಶಾಕ್
Advertisement
Advertisement
ತಮ್ಮ ಜಮೀನಿನಲ್ಲಿ ಉಳುಮೆ ಮಾಡುವಾಗ ಹೊಲದ ಏರಿಯಿಂದ ಮತ್ತೊಂದು ಜಮೀನಿಗೆ ಎರಡು ಪಲ್ಟಿ ಹೊಡೆದಿದೆ ಎನ್ನಲಾಗುತ್ತಿದೆ. ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಶಿವಕುಮಾರ್ಗೆ ಆರು ತಿಂಗಳ ಮಗುವೊಂದು ಇದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಾಮರಾಜನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ದಾಂಡಿಯಾ ನೃತ್ಯ ಮಾಡುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ವ್ಯಕ್ತಿ ಸಾವು