ಮಂಡ್ಯ: ಕಬ್ಬಿನ ದರ ನಿಗದಿ, ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್‌ಗೆ ಕರೆ ನೀಡಿದೆ.
ಮಂಡ್ಯ ಬಂದ್‌ಗೆ (Mandya Bandh) ಕೆಲ ದಲಿತ ಸಂಘಟನೆಗಳು, ರೈತ (Farmers) ಪರ ಮತ್ತು ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸೇರಿದಂತೆ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಬಂದ್‌ಗೆ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಲು ವರ್ತಕರು ಒಪ್ಪಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಬಂದ್ ನಡೆಯಲಿದೆ.
Advertisement
Advertisement
ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು. ಪ್ರತಿ ಲೀಟರ್ ಹಾಲಿಗೆ 40 ರೂ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇದನ್ನೂ ಓದಿ: ಡಿ.25ಕ್ಕೆ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ?
Advertisement
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಎಚ್ಚುವರಿ ಎಸ್‌ಎಪಿ ಘೋಷಣೆಯಾಗಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟಿಸುತ್ತಿದ್ದಾರೆ.
Advertisement
ಮಂಡ್ಯ ನಗರದ ಅಂಗಡಿ ಮುಗ್ಗಟುಗಳು ಬಂದ್ ಆಗಿದ್ದು, ಕೆಎಸ್‍ಆರ್‌ಟಿಸಿ ಬಸ್ ಸಂಚಾರ ಇಳಿಮುಖ ಆಗಿದೆ. ಬೆಳಗ್ಗೆ10 ಗಂಟೆಗೆ ರೈತರು ಹೆದ್ದಾರಿ ತಡೆದು ಪ್ರತಿಭಟನೆ, ಬೈಕ್ ರ್‍ಯಾಲಿ ನಡೆಸಲಿದ್ದಾರೆ.