ನವದೆಹಲಿ: ಲೋಕಸಭಾ ಚುನಾವಣೆಯ ಒಳಗಡೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ರೈತರ ಖಾತೆಗಳಿಗೆ 4 ಸಾವಿರ ರೂ. ಜಮೆಯಾಗುವ ಸಾಧ್ಯತೆಯಿದೆ.
ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆ ಅಡಿ ಪ್ರತಿವರ್ಷ 3 ಕಂತುಗಳಲ್ಲಿ 6 ಸಾವಿರ ರೂ. ಹಣವನ್ನು ರೈತರ ಖಾತೆ ಜಮೆ ಮಾಡುವ ಯೋಜನೆಯನ್ನು ಕೇಂದ್ರ ಸರ್ಕಾರ ಈ ವರ್ಷದಿಂದ ಆರಂಭಿಸಿದೆ.
Advertisement
ಈ ಯೋಜನೆ ಅನ್ವಯ ಮೊದಲ ಕಂತನ್ನು ಮಾರ್ಚ್ 31ರ ಒಳಗಡೆ ಹಾಕಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿದೆ. ಇದರ ಜೊತೆಯಲ್ಲೇ ಎರಡನೇ ಕಂತಿನ ಹಣವನ್ನು ಲೋಕಸಭಾ ಚುನಾವಣೆಯ ಒಳಗಡೆ ಜಮೆ ಮಾಡಲು ಸರ್ಕಾರ ಪ್ರಯತ್ನ ನಡೆಸುತ್ತಿದೆ.
Advertisement
Advertisement
ಯೋಜನೆ ಜಾರಿ ಸಂಬಂಧ ಕೇಂದ್ರ ಕೃಷಿ ಕಾರ್ಯದರ್ಶಿ ಸಂಜಯ್ ಅಗರ್‍ವಾಲ್ ಮಂಗಳವಾರ ವಿಡಿಯೋ ಕರೆ ಮಾಡಿ ವಿವಿಧ ರಾಜ್ಯಗಳ ಕೃಷಿ ಸಚಿವಾಲಯದ ಅಧಿಕಾರಿಗಳ ಜೊತೆ ಮಾತನಾಡಿ ಡೆಡ್‍ಲೈನ್ ಒಳಗಡೆ ಫಲಾನುಭವಿ ರೈತರ ಪಟ್ಟಿಯನ್ನು ನೀಡುವಂತೆ ಕೇಳಿಕೊಂಡಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಈಗಾಗಲೇ ರೈತರ ಸಾಲಮನ್ನಾ ಯೋಜನೆ ಪ್ರಕಟಿಸಿದ ಹಿನ್ನೆಲೆಯಲ್ಲಿ ಶೀಘ್ರವೇ ರೈತರ ಪಟ್ಟಿ ನೀಡುವುದಾಗಿ ತಿಳಿಸಿದೆ.
Advertisement
ಚಾಲನೆಯಲ್ಲಿರುವ ಯೋಜನೆ ಇದಾಗಿರುವ ಕಾರಣ ಇದಕ್ಕೆ ನೀತಿ ಸಂಹಿತಿ ಅಡ್ಡಿಯಾಗುವುದಿಲ್ಲ. ಆದರೆ ನೀತಿ ಸಂಹಿತೆ ಜಾರಿಯಾದ ಬಳಿಕ ಫಲಾನುಭವಿಗಳ ಸೇರ್ಪಡೆ ಅಸಾಧ್ಯ ಎನ್ನುವ ಮಾಹಿತಿಯನ್ನು ಮೂಲಗಳು ತಿಳಿಸಿವೆ.
ಏನಿದು ಯೋಜನೆ?
2 ಹೆಕ್ಟೇರ್ ಜಮೀನು ಹೊಂದಿರುವ ಸಣ್ಣ ರೈತರ ಬ್ಯಾಂಕ್ ಖಾತೆಗೆ ನೇರವಾಗಿ 6 ಸಾವಿರ ರೂ. ಮೊತ್ತವನ್ನು ಮೂರು ಕಂತುಗಳಲ್ಲಿ ಜಮೆ ಮಾಡುವ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಎಂದು ಕರೆಯಲಾಗುವ ಯೋಜನೆಯನ್ನು ಹಣಕಾಸು ಸಚಿವ ಪಿಯೂಶ್ ಗೋಯಲ್ ಈ ಬಾರಿಯ ಬಜೆಟ್ ನಲ್ಲಿ ಘೋಷಿಸಿದ್ದರು.
ಈ ಯೋಜನೆಯಿಂದ 12 ಕೋಟಿಯಷ್ಟು ಸಣ್ಣ ಮತ್ತು ಬಡರೈತರಿಗೆ ಪ್ರಯೋಜನವಾಗಲಿದ್ದು, 2019-20ರ ಸಾಲಿನಲ್ಲಿ ಸರ್ಕಾರಕ್ಕೆ 75 ಸಾವಿರ ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ. ಕೃಷಿ ಸಂಬಂಧಿ ಇತರ ಚಟುವಟಿಕೆಗಳಿಗೆ ಈ ಹಣ ನೆರವಾಗಲಿದೆ. ರೈತರು ಗೌರವಯುತ ಜೀವನ ಸಾಗಿಸಲು ಇದರಿಂದ ಸಾಧ್ಯವಾಗುತ್ತದೆ. 2018-19ರ ಸಾಲಿನಲ್ಲಿ ಪರಿಷ್ಕೃತ ಅಂದಾಜು ವಿಭಾಗದಲ್ಲಿ 20 ಸಾವಿರ ಕೋಟಿ ರೂ. ನೀಡಲಾಗಿದೆ. 2018ರ ಡಿಸೆಂಬರ್ ಪೂರ್ವಾನ್ವಯದಂತೆ ಈ ಯೋಜನೆ ಜಾರಿಯಾಗಲಿದೆ ಎಂದು ಗೋಯೆಲ್ ತಿಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv