– ಇನ್ನೂ ನಮ್ಮ ಸಮಸ್ಯೆ ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ವಾ?
ಮೈಸೂರು: ಚುನಾವಣಾ (Lok Sabha Election 2024) ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ (Yathindra Siddaramaiah) ಅವರನ್ನು ರೈತರು ತರಾಟೆಗೆ ತೆಗೆದುಕೊಂಡ ಘಟನೆ ನಂಜನಗೂಡಿನ ಮಲ್ಲುಪುರ ಗ್ರಾಮದಲ್ಲಿ ನಡೆದಿದೆ.
Advertisement
ಚಾಮರಾಜನಗರ (Chamarajanagar) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಯತೀಂದ್ರ ಸಿದ್ದರಾಮಯ್ಯ ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ ಗ್ರಾಮದಲ್ಲಿರುವ ಸಕ್ಕರೆ ಕಾರ್ಖಾನೆ ಬಳಿ ವಿವಿಧ ಬೇಡಿಕೆ ಈಡೇರಿಸುವಂತೆ ಎರಡು ತಿಂಗಳಿಂದ ರೈತರು ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರು ಯತೀಂದ್ರ ಅವರ ಬಳಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಬೇಡಿಕೆ ಈಡೇರದಿದ್ದರೆ ಮೂರು ಗ್ರಾಮಗಳಿಂದ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ. ಇದನ್ನೂ ಓದಿ: ತಾಲಿಬಾನ್‍ಗಳ ಪ್ರೇರಣೆ, ನಗರ ನಕ್ಸಲಿಯರ ಸಹಾಯದಿಂದ ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದೆ: ಸಿಟಿ ರವಿ
Advertisement
Advertisement
ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ. ನೀವು ಚುನಾವಣೆಗಾಗಿ ಇಲ್ಲಿಗೆ ಬಂದಿದ್ದೀರಿ. ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಇಲ್ಲಿಗೆ ಬರುತ್ತಿರಲಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಈ ವಿಚಾರವನ್ನು ನಮ್ಮ ತಂದೆಯವರ ಗಮನಕ್ಕೆ ತರುತ್ತೇನೆ ಎಂದು ಯತೀಂದ್ರ ಹೇಳಿದ್ದಾರೆ. ಈ ವೇಳೆ ರೈತರು, ಇನ್ನೂ ಈ ವಿಚಾರವನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವಾ ಎಂದು ಆಕ್ರೋಶದಿಂದ ಪ್ರಶ್ನಿಸಿದ್ದಾರೆ. ಬಳಿಕ ಪ್ರತಿಭಟನಕಾರರಿಗೆ ಉತ್ತರಿಸಲಾಗದೆ ಯತೀಂದ್ರ ವಾಪಸ್ ತೆರಳಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಮುಗಿಯದ ವೈಮನಸ್ಸು- ಪ್ರಚಾರದ ವಿಚಾರದಲ್ಲೂ ಅಡ್ಡಗೋಡೆ ಮೇಲೆ ದೀಪವಿಟ್ಟ ಪ್ರೀತಂ