ಬೀದರ್: ನಾನು ಮಣ್ಣಿನ ಮಗ ಎಂದು ರೈತರ ಪರ ಬ್ಯಾಟಿಂಗ್ ಮಾಡುವ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಾರಂಜಾ ಹಿನ್ನೀರಿನಲ್ಲಿ ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌದದಲ್ಲಿ ಇಂದು ಜಂಟಿ ಅಧಿವೇಶನ ನಡೆಯುತ್ತಿದ್ದು 10ಕ್ಕೂ ಹೆಚ್ಚು ಶಾಸಕರು ಅಧಿವೇಶನಕ್ಕೆ ಗೈರಾಗಿದ್ದಕ್ಕೆ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಸಿಎಂ ಎಚ್‍ಡಿಕೆ ತುಂಬಾ ತಲೆಕೆಡಿಸಿಕೊಂಡಿದ್ದಾರೆ. ಇದೇ ಬೆನ್ನಲ್ಲಿ ಇಂದು ಕಾರಂಜಾ ಹಿನ್ನೀರಿನಲ್ಲಿ ಭೂಮಿ ಹಾಗೂ ಮನೆ ಕಳೆದುಕೊಂಡ ಕಾರಂಜಾ ಸಂತ್ರಸ್ತರು ಇಂದು ಬೀದರ್ ಟು ಹುಮ್ನಾಬಾದ್ ರಾಜ್ಯ ಹೆದ್ದಾರಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
Advertisement
Advertisement
ಸಾವಿರಾರು ಸಂಖ್ಯೆಯಲ್ಲಿ ರೈತರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಾ, ಸಿಎಂ ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅಷ್ಟೇ ಅಲ್ಲದೆ ಜಿಲ್ಲೆಯ ಮೂವರು ಸಚಿವರು ಹಾಗೂ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ. ಈ ವೇಳೆ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಸರ್ಪಗಾವಲು ಹಾಕಿದ್ದರು.
Advertisement
Advertisement
ಚುನಾವಣೆ ವೇಳೆ ಶಾಸಕರು ಹಾಗೂ ಸಚಿವರು ಬೀದರ್‍ಗೆ ಬಂದು ಕಾರಂಜಾ ಹಿನ್ನೀರಿನಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ನೀಡುವುದಾಗಿ ಸುಳ್ಳು ಆಶ್ವಾಸನೆ ನೀಡಿ ಹೋಗಿದ್ದೀರಿ. ಒಂದು ವೇಳೆ ಈ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಿಲ್ಲಾ ಅಂದ್ರೆ ಮೂರು ತಾಲೂಕುಗಳಿಗೆ ಕಾರಂಜಾ ನೀರು ಬಂದ್ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv