– ಪ್ರತಿಭಟನೆ ವೇಳೆ ರೈತರಿಂದ ವಿಷ ಸೇವನೆಗೆ ಯತ್ನ
ರಾಮನಗರ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ (Bidadi Integrated Township) ವಿರೋಧಿಸಿ ರೈತರ (Farmers) ಅಹೋರಾತ್ರಿ ಧರಣಿ ಮುಂದುವರೆದಿದ್ದು, 5ನೇ ದಿನಕ್ಕೆ ರೈತರ ಹೋರಾಟ ಕಾಲಿಟ್ಟಿದೆ. ಬಿಡದಿಯ ಭೈರಮಂಗಲ ಗ್ರಾಮದಲ್ಲಿ ನಡೆಯುತ್ತಿರೋ ಪ್ರತಿಭಟನೆಗೆ ಇಂದು ವಿಪಕ್ಷ ನಾಯಕ ಅಶೋಕ್, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ ಹಾಗೂ ಸಂಸದ ಡಾ.ಮಂಜುನಾಥ್ ಸಾಥ್ ನೀಡಿದ್ದಾರೆ.
ಗ್ರಾಮಕ್ಕೆ ಎತ್ತಿನಬಂಡಿಯಲ್ಲಿ ಆಗಮಿಸಿದ ಆರ್.ಅಶೋಕ್ (R Ashok) ರೈತರ ಜೊತೆ ಕೂತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಯಾವುದೇ ಕಾರಣಕ್ಕೂ ಟೌನ್‌ಶಿಪ್ ಯೋಜನೆಗೆ ಕೃಷಿ ಭೂಮಿ ಬಳಕೆ ಮಾಡಬಾರದು. ರೈತರನ್ನ ಒಕ್ಕಲೆಬ್ಬಿಸುವ ಸರ್ಕಾರದ ವಿರುದ್ಧ ಒಟ್ಟಾಗಿ ಹೋರಾಟ ಮಾಡೋಣ. ಈ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇನೆ. ರೈತರ ಪರವಾಗಿ ನಾವು ಹೋರಾಟ ಮಾಡುತ್ತೇವೆ ಎಂದು ಅಶೋಕ್ ರೈತರಿಗೆ ಭರವಸೆ ನೀಡಿದರು. ಇದನ್ನೂ ಓದಿ: ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು – ಖರ್ಗೆ ಮಗನಿಗೂ ಮೀಸಲಾತಿ, ಇದು ಸರಿನಾ: ವಿಶ್ವನಾಥ್ ಪ್ರಶ್ನೆ
ಇನ್ನೂ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಿರುವಾಗಲೇ, ರೈತರು ಭೂಸ್ವಾಧೀನ ವಿರೋಧಿಸಿ ಆತ್ಮಹತ್ಯೆಗೆ ಯತ್ನಿಸಿದರು. ಇಬ್ಬರು ರೈತ ಮಹಿಳೆಯರು ಹಾಗೂ ಓರ್ವ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಈ ವೇಳೆ ಕೂಡಲೇ ಪೊಲೀಸರು ರೈತರ ಕೈಯಿಂದ ಕ್ರಿಮಿನಾಶಕದ ಬಾಟಲಿಗಳನ್ನ ಕಿತ್ತು ಬಿಸಾಕಿದರು. ವಿಷ ಕುಡಿಯಲು ಯತ್ನಿಸಿದವರನ್ನು ಅಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಇದನ್ನೂ ಓದಿ: ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ
ಈ ವೇಳೆ ಯಾರೂ ಆತ್ಮಹತ್ಯೆ ನಿರ್ಧಾರ ಮಾಡಬೇಡಿ, ನಿಮ್ಮ ಭೂಮಿ ಉಳಿಸಿಕೊಡುವ ಕೆಲಸ ನಾವು ಮಾಡುತ್ತೇವೆ ಎಂದು ರೈತರಿಗೆ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಮನವಿ ಮಾಡಿದರು. ಇದನ್ನೂ ಓದಿ: Malur Election | ಸ್ವತಂತ್ರ ಅಭ್ಯರ್ಥಿಗಳು ಪಡೆದ ಮತ ಗೆದ್ದವರಿಗೆ ಸೇರಿಸಿದ್ದಾರೆ: ಕೆ.ಎಸ್ ಮಂಜುನಾಥ್ ಗೌಡ