ಬೆಳಗಾವಿ: ಕಬ್ಬು ಬೆಳೆಗಾರರಿಗೆ 5,500 ರೂ. ದರ ನಿಗದಿ ಮಾಡುವಂತೆ ಒತ್ತಾಯಿಸಿ ಬೆಳಗಾವಿಯ ಡಿಸಿ ಕಚೇರಿಗೆ ಬೀಗ ಹಾಕಿ ರೈತರು ಪ್ರತಿಭಟನೆ ನಡೆಸಿದರು.
ಬೆಳಗಾವಿ (Belagavi) ಡಿಸಿ ಕಚೇರಿಗೆ (DC Office) ಬೀಗ ಹಾಕಿ ಮುಂಭಾಗದಲ್ಲಿ ಪ್ರತಿಭಟನೆ (Protest) ನಡೆಸಿದ ರೈತರು (Farmer) ಕಬ್ಬು ಬೆಳೆಗಾರರಿಗೆ 5,500 ರೂ. ದರ ನಿಗದಿ ಮಾಡುವಂತೆ ಒತ್ತಾಯ ಮಾಡಿದ್ದರು. ಅಷ್ಟೇ ಅಲ್ಲದೇ ಡಿಸಿ ಕಚೇರಿ ಮುಂಭಾಗದಲ್ಲಿಯೇ ಹಾಸಿಗೆ ಹಾಸಿ ರೈತರು ಪ್ರತಿಭಟಿಸಿದರು. ಇದನ್ನೂ ಓದಿ: ಪುಟಿನ್ ಕನಸಿನ ಸೇತುವೆ ಧ್ವಂಸಗೊಳಿಸಿದ್ದಕ್ಕೆ ಕೆರಳಿದ ರಷ್ಯಾ – ಉಕ್ರೇನ್ ಮೇಲೆ ಮತ್ತಷ್ಟು ತೀವ್ರ ದಾಳಿ
Advertisement
Advertisement
ರೈತರಿಗೆ 5,500 ರೂ. ದರ ನಿಗದಿ ಸೇರಿದಂತೆ ಇತರ ಬೇಡಿಕೆ ಈಡೇರಿಸುವಂತೆ ನಿನ್ನೆ ಡಿಸಿಗೆ ರೈತರು ಮನವಿ ಮಾಡಿದ್ದರು. ಆದರೆ ಡಿಸಿ ನಿತೇಶ್ ಪಾಟೀಲ್ ನಡೆಸಿದ ಸಂಧಾನ ವಿಫಲ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರಿದಿದೆ. ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಸ್ಥಳಕ್ಕೆ ಸಕ್ಕರೆ ಸಚಿವರು ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಧಾರಾಕಾರ ಮಳೆ – ಇಂದು, ನಾಳೆ ಯೆಲ್ಲೋ ಅಲರ್ಟ್