ಮಡಿಕೇರಿ: ಕೊಡಗಿನಾದ್ಯಂತ ಹಲವು ದಿನಗಳಿಂದ ಮಳೆ ಸುರಿದು ಹಳ್ಳಕೊಳ್ಳ ಉಕ್ಕಿ ಹರಿದರೂ ಜಿಲ್ಲೆಯ ರೈತಾಪಿ ವರ್ಗ ನೀರಿಗಾಗಿ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಎದುರಾಗಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯದಿಂದ ಕೃಷಿ ಚಟುವಟಿಕೆಗಾಗಿ ಕಾಲುವೆಗಳಿಗೆ ನೀರು ಹರಿಸುವಂತೆ ಕೆಲವು ದಿನಗಳ ಹಿಂದೆ ನಾಲೆಗಳಿಗೆ ನೀರು ಬೀಡಬೇಕು ಎಂದು ಆಗ್ರಹಿಸಿ ಹಾರಂಗಿ ಅಚ್ಚುಕಟ್ಟು ಪ್ರದೇಶದ ರೈತರು ಜಲಾಶಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು.
Advertisement
ಕೆಆರ್‍ಎಸ್ ತುಂಬಿಸಲು ಹಾರಂಗಿಯಿಂದ ನೀರು ಹರಿಸಲಾಗುತ್ತಿದೆ. ಆದರೆ ಈ ನೀರು ಕರ್ನಾಟಕದ ರೈತರಿಗೆ ಸಿಗದೇ ತಮಿಳುನಾಡುಗೆ ಹೋಗುತ್ತಿದೆ. ಹೀಗಾಗಿ ತಮಿಳುನಾಡಿಗೆ ಹರಿಸುವ ನೀರನ್ನು ನಿಲ್ಲಿಸಿ, ನಾಲೆಗಳಿಗೆ ನೀರು ಹರಿಸಬೇಕು ಎಂದು ಪ್ರತಿಭಟನಾ ನಿರತ ರೈತರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ನಾಲೆಗಳಿಗೆ 50 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ಇನ್ನು ನದಿಗೆ 5200 ಕ್ಯೂಸೆಕ್ ನೀರು ಬಿಡಲಾಗುತ್ತಿದೆ.
Advertisement
Advertisement
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿ ಇದ್ದು, ಇಂದಿನ ನೀರಿನ ಮಟ್ಟ 2858.28 ಅಡಿ ಇದೆ. ಕಳೆದ ವರ್ಷ ಇದೆ ದಿನ 2857.83 ಅಡಿ ಇದ್ದು, ಇಂದಿನ ನೀರಿನ ಒಳ ಹರಿವು 3907 ಕ್ಯೂಸೆಕ್ ಇದೆ. ಕಳೆದ ವರ್ಷ ಇದೆ ದಿನ ನೀರಿನ ಒಳಹರಿವು 3885 ಕ್ಯೂಸೆಕ್ ಇತ್ತು. ಇಂದು ನದಿಗೆ 5200 ಕ್ಯೂಸೆಕ್ ನೀರನ್ನು ಹರಿಸುತ್ತಿದ್ದರೆ, ನಾಲೆಗೆ 50 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.
Advertisement
ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು cubic foot per second ಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.