ಮಂಗಳೂರು: ಮುಡಾ ಪಡೆದಿರುವ ಜಮೀನಿಗೆ ಬದಲಾಗಿ ರೈತರಿಗೆ 50:50 ಸೈಟ್ ಕೊಡಲೇಬೇಕು ಎಂದು ಶಾಸಕ ಜಿ.ಟಿ ದೇವೇಗೌಡ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ (Mangaluru) ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಮುಡಾದಲ್ಲಿ ದೇವೇಗೌಡರ ಪ್ರಭಾವ ಬಳಸಿ ಮಹೇಂದ್ರ 19 ಸೈಟ್ ಪಡೆದಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಸ್ನೇಹಮಯಿ ಕೃಷ್ಣ ಬುದ್ಧಿವಂತ, ಅವನಲ್ಲಿ ಶಕ್ತಿ ಇದೆ. ಒಂದು ಎಕರೆ ಭೂಮಿ ಸ್ವಾಧೀನ ಪಡಿಸಿ ದುಡ್ಡಿನ ಪರಿಹಾರ ನೀಡಿದ್ರೆ ಒಂದು ಸೈಟ್ ಕೊಡ್ತಾರೆ. ಆ ಜಮೀನಿಗೆ ಪರಿಹಾರ ಕೊಡದೇ ಇದ್ರೆ 50:50 ನಲ್ಲಿ ಸೈಟ್ ಕೊಡಬೇಕು. ರೈತರ ಜಮೀನಿಗೆ ಇದನ್ನು ಕಾನೂನು ಬದ್ಧವಾಗಿ ಕೊಡಬೇಕು ಎಂದು ಹೇಳಿದರು. ಇದನ್ನೂ ಓದಿ: ಬೈಡನ್ ರೀತಿ ಮೋದಿ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Advertisement
ಮುಡಾ ಪಡೆದಿರುವ ಜಮೀನಿಗೆ 50:50 ಸೈಟ್ ಕೊಡಲೇಬೇಕು. ಕೊಡುವ ಪ್ರಕ್ರಿಯೆಯಲ್ಲಿ ತಪ್ಪಾಗಿದ್ರೆ ಶಿಕ್ಷೆ ಅನುಭವಿಸುತ್ತಾರೆ. ನನ್ನ ಸಂಬಂಧಿಯೇ ಆಗಲಿ, ಯಾರೇ ಆಗಲಿ ಶಿಕ್ಷೆಯಾಗಬೇಕು. ಭೂಮಿ ನೀಡಿದ ರೈತನಿಗೆ 50:50ನಲ್ಲಿ ಸೈಟ್ ಕೊಡಲೇಬೇಕು. ಹೀಗೆ ಮಾಡುವ ಸಂದರ್ಭದಲ್ಲಿ ಕೆಲವು ನ್ಯೂನತೆಗಳಾಗಿದೆ. ರೈತರಿಗೆ ಅಧಿಕೃತವಾಗಿ 50:50 ಕೊಡೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ. 50:50 ಕೊಡೋದ್ರಲ್ಲಿ ದುರುಪಯೋಗ ಆಗಿದ್ರೆ ಅವರಿಗೆ ಶಿಕ್ಷೆಯಾಗಬೇಕು. ಕಾನೂನು ಉಲ್ಲಂಘನೆ ಆಗಿದ್ರೆ ಎಲ್ಲರಿಗೂ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
Advertisement
Advertisement
ವಿರೋಧ ಪಕ್ಷದ ನಾಯಕನ ಆಯ್ಕೆ ಸಂದರ್ಭದಲ್ಲಿ ಕೋರ್ ಕಮಿಟಿ ಮೀಟಿಂಗ್ ಕರೆದಿದ್ದರು. ನಾನೂ ಪಬ್ಲಿಕ್ ಅಕೌಂಟ್ಸ್ ಕಮಿಟಿ ಟೂರ್ ಹೋಗಿದ್ದೆ. ಆ ಸಂದರ್ಭದಲ್ಲಿ ಮೀಟಿಂಗ್ ಕರೆದು ನನ್ನ ಬಿಟ್ಟು ನಾಯಕನ ಆಯ್ಕೆ ಮಾಡಿದ್ರು. ನಿಖಿಲ್ ಕುಮಾರಸ್ವಾಮಿ ಮೈಸೂರಿಗೆ ಬಂದಾಗ ಕರೆದಿದ್ದರು. ಆ ಸಭೆಯಲ್ಲಿ ನಾನು ಭಾಗವಹಿಸಿದ್ದೆ. ಅಲ್ಲಿ ಸಾ.ರಾ ಮಹೇಶ್ ಇನ್ನು ಎಚ್.ಡಿ ಕುಮಾರಸ್ವಾಮಿ, ಎಚ್.ಡಿ ದೇವೆಗೌಡ್ರು ಇಲ್ಲ. ಇನ್ನು ನಾನೇ ಬಿ.ಫಾರಂ ಕೊಡೋದೆಂದು ಭಾಷಣ ಮಾಡಿದ್ದರು. ಆಗ ನಿಖಿಲ್ ಕುಮಾರಸ್ವಾಮಿ ಬಂದು ಕ್ಷಮಿಸಿ ತಪ್ಪಾಗಿ ಭಾಷಣ ಮಾಡಿದ್ದಾರೆ ಎಂದು ಹೇಳಿದರು. ನಾನು ಪಕ್ಷ ಕಟ್ಟುವ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇನೆ. ಯಾಕೇ ನನ್ನನ್ನು ಬಿಟ್ಟಿದ್ದಾರೆಂದು ಅವರೇ ಹೇಳಬೇಕು ಎಂದು ಹೇಳಿದರು. ಇದನ್ನೂ ಓದಿ: ತಿಮ್ಮಸಂದ್ರ ವಕ್ಫ್ ಆಸ್ತಿ ಪ್ರಕರಣ – ರೈತರಿಗೆ ಭೂಮಿ ಮಂಜೂರು ಆಗಿರೋ ದಾಖಲೆಗಳಿಲ್ಲ ಎಂದ ಡಿಸಿ
Advertisement
ಚನ್ನಪಟ್ಟಣ (Channapatna) ಉಪಚುನಾವಣಾ ಪ್ರಚಾರದಲ್ಲಿ ತಾವು ಹೊರಗುಳಿದಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾರು ಸಹ ನನ್ನನ್ನು ಚುನಾವಣೆಗೆ ಬನ್ನಿ ಎಂದು ಕರೆದಿಲ್ಲ. ಕೋರ್ ಕಮಿಟಿ ಅಧ್ಯಕ್ಷನಾಗಿದ್ದರು ಸಹ ಪ್ರಚಾರದ ಪಟ್ಟಿಯಿಂದ ನನ್ನ ಹೆಸರನ್ನು ತೆಗೆದಿದ್ದಾರೆ. ದೂರವಾಣಿ ಮೂಲಕನೂ ನನ್ನ ಕರೆದಿಲ್ಲ, ಹಾಗಾಗಿ ನಾನು ಭಾಗವಹಿಸಿಲ್ಲ. ಕೋರ್ ಕಮಿಟಿ ಅಧ್ಯಕ್ಷನನ್ನು ಬಿಟ್ಟೇ ಮೀಟಿಂಗ್ ಮಾಡಿದ್ದಾರೆ. ಯಾಕಾಗಿ ಈ ರೀತಿ ಮಾಡಿದ್ದಾರೆಂದು ಅವರೇ ಹೇಳಬೇಕು. ಚಾಮುಂಡಿ ಬೆಟ್ಟದಲ್ಲಿ ಅಂತದ್ದೇನು ತಪ್ಪು ಮಾತನಾಡಿಲ್ಲ. ಸಿದ್ದರಾಮಯ್ಯನವರು 135 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿದ್ದಾರೆ. ಎಚ್.ಡಿ ಕುಮಾರಸ್ವಾಮಿ 2ಲಕ್ಷ ಲೀಡ್‌ನಲ್ಲಿ ಗೆದ್ದು ಎಂಪಿ ಆಗಿದ್ದಾರೆ. ಅಶೋಕ್ ಅವರು ಗೆದ್ದು ವಿರೋಧ ಪಕ್ಷದ ನಾಯಕರಾಗಿದ್ದಾರೆ ಎಂದು ತಿಳಿಸಿದರು.
ಕೇಂದ್ರದಲ್ಲೂ ಕೆಲವರ ಮೇಲೆ ಎಫ್ಐಆರ್ ಆಗಿದೆ. ಇಲ್ಲಿ ಯಾರ ಮೇಲೆ ಎಫ್ಐಆರ್ ಆಗಿದೆ ಎಂದು ಗೊತ್ತು. ನ್ಯಾಯಾಲಯದ ತೀರ್ಪು ಬಂದು ತಪ್ಪಿತಸ್ಥ ಅಂದ ಮೇಲೆ ಅವರಿಗೆ ಶಿಕ್ಷೆ ಆಗುತ್ತೋ, ರಾಜೀನಾಮೆ ಕೊಡಬೇಕೋ, ಜೈಲಿಗೆ ಹಾಕಬೇಕೋ ಅದನ್ನ ಮಾಡಬೇಕು. ಅದು ಬಿಟ್ಟು ಕಾಂಗ್ರೆಸ್ ಮಂತ್ರಿಗಳು ಪ್ರತೀ ದಿವಸ ಕುಮಾರಸ್ವಾಮಿ ರಾಜೀನಾಮೆ ಕೊಡಿ ಎಂದು ಕೇಳೋದು, ಬಿಜೆಪಿ ದಳದವರು ಸೇರಿ ಸಿದ್ದರಾಮಯ್ಯ (Siddaramaih) ರಾಜೀನಾಮೆ ಕೊಡಿ ಎಂದು ಕೇಳೋದು ಇದು ಯಾವುದು ಸರಿಯಲ್ಲ. ನ್ಯಾಯಾಲಯದ ತೀರ್ಪು ಬರುವವರೆಗೆ ಯಾರು ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಕೊಟ್ರೆ ಇಡೀ ವಿಧಾನಸೌಧದಲ್ಲಿರುವ 75% ಶೇಕಡಾ ರಾಜೀನಾಮೆ ಕೊಡಬೇಕಾಗುತ್ತದೆ. ಕೇಂದ್ರ ರಾಜ್ಯದಲ್ಲಿ ಬಹಳಷ್ಟು ಜನ ಇದ್ದಾರೆ. ಇಷ್ಟು ಹೇಳಿದ್ದೆ ದೊಡ್ಡ ಅಪರಾಧ ಎಂದು ತಿಳ್ಕೊಂಡ್ರೆ ನಾನೇನು ಮಾಡೋಕೆ ಆಗುತ್ತೆ ಇಷ್ಟು ಹೇಳಿದ್ದೆ ದೊಡ್ಡ ಅಪರಾಧ ಅಂತಾ ತಿಳ್ಕೊಂಡ್ರೆ ನಾನೇನು ಮಾಡೋಕೆ ಆಗುತ್ತೆ ಎಂದು ಹರಿಹಾಯ್ದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ 2,021 ಬಿಪಿಎಲ್ ಕಾರ್ಡುಗಳು ಎಪಿಎಲ್‌ಗೆ ಮಾರ್ಪಾಡು
ಕೇಂದ್ರ ಸಚಿವ ಕುಮಾರಸ್ವಾಮಿ (HDKumaraswamy) ಅವರನ್ನು ಕರಿಯಾ ಎಂದು ಸಚಿವ ಜಮೀರ್ ಹೇಳಿಕೆ ವಿಚಾರ ಪ್ರತಿಕ್ರಿಯೆ ನೀಡಿ, ಜಮೀರ್ ಕುಮಾಸ್ವಾಮಿಗೆ ಆ ರೀತಿ ಮಾತನಾಡಬಾರದಿತ್ತು ಎಂಬ ಅರಿವಾಗಿದೆ ಹೀಗಾಗಿ ಕ್ಷಮೆಯನ್ನು ಸಹ ಕೇಳಿದ್ದಾರೆ. ಯಾವುದೇ ವ್ಯಕ್ತಿ ಸಚಿವರಾದ ಮೇಲೆ ಆ ಸಚಿವ ಸ್ಥಾನದ ಗೌರವವನ್ನು ಕಾಪಾಡೋದು ಅವರೆಲ್ಲರ ಕರ್ತವ್ಯ ಯಾರೂ ಕೂಡಾ ಆ ರೀತಿ ಮಾತನಾಡಬಾರದು ಎಂದರು. ಇದನ್ನೂ ಓದಿ: ಸಚಿವ ಕೆ.ಜೆ ಜಾರ್ಜ್ ಪುತ್ರನ ಅರಣ್ಯದೊಳಗಿನ ಜಮೀನಿಗೆ ದಾರಿ ಬಂದ್ – ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್