ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಪ್ರಯೋಜನೆ ಪಡೆಯುತ್ತಿರುವ ರೈತರ ಸಂಖ್ಯೆ ಕಡಿಮೆಯಿದ್ದು, ಎಲ್ಲ ರೈತರು ಇದರ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‍ನಲ್ಲಿ 96 ಸಾವಿರಕ್ಕೂ ಅಧಿಕ ರೈತರು ಖಾತೆಯನ್ನು ಹೊಂದಿದ್ದರೂ, ಫಸಲ್ ಭೀಮಾ ಯೋಜನೆಯಡಿ ನೋಂದಾಯಿಸಿರುವ ರೈತರ ಸಂಖ್ಯೆ ಕೇವಲ 19 ಸಾವಿರ ಮಾತ್ರ. ಬೆಳೆ ಹಾನಿ ಸಂಭವಿಸಿದ ಸಂದರ್ಭದಲ್ಲಿ ವಿಮಾ ಹಣವನ್ನು ನೀಡುವ ಈ ಮಹತ್ವದ ಯೋಜನೆ ಬಗ್ಗೆ ರೈತರಿಗೆ ಮಾಹಿತಿಯನ್ನು ಒದಗಿಸಿ, ಯೋಜನೆಯ ಲಾಭವನ್ನು ಹೆಚ್ಚಿನ ರೈತರು ಪಡೆಯುವಂತೆ ಮನವೊಲಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ತುಂಗಾಭದ್ರಾ ಆರತಿಯಿಂದ ಹರಿಹರದ ಗತವೈಭವ ಮರಳಿ ಪಡೆಯುವ ಗುರಿ: ವಚನಾನಂದ ಸ್ವಾಮೀಜಿ
Advertisement
Advertisement
ರೈತರಿಗೆ ನೀಡಲಾಗುತ್ತಿರುವ ಬೆಂಬಲ ಬೆಲೆಯ ಸಂಪೂರ್ಣ ಲಾಭ ರೈತರಿಗೆ ದೊರೆಯುವಂತೆ ನೋಡಿಕೊಳ್ಳಬೇಕು. ಮಧ್ಯವರ್ತಿ ವ್ಯಾಪಾರಿಗಳಿಗೆ ಇದರ ಪ್ರಯೋಜನ ಪಡೆದುಕೊಳ್ಳದಂತೆ ಎಚ್ಚರಿಕೆ ವಹಿಸಬೇಕು. ರೈತರು ಭತ್ತವನ್ನು ಪಕ್ಕದ ಜಿಲ್ಲೆಯ ಅಕ್ಕಿ ಗಿರಣಿಗಳಿಗೆ ಸಾಗಾಣಿಕೆ ಮಾಡಿದ್ದಲ್ಲಿ, ಅದಕ್ಕೆ ತಗಲುವ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುತ್ತಿದ್ದು, ನೇರವಾಗಿ ರೈತರ ಖಾತೆಗೆ ಹಣ ಜಮಾ ಆಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
Advertisement
ಕಳೆದ ಮುಂಗಾರು ಹಂಗಾಮಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿ ಸಂಭವಿಸಿರುವ ಪ್ರಕರಣಕ್ಕೆ ಹೆಚ್ಚಿನ ಪರಿಹಾರವನ್ನು ಒದಗಿಸಬೇಕು. ಈ ನಿಟ್ಟಿನಲ್ಲಿ ತಾಲೂಕುವಾರು ಬೆಳೆಹಾನಿ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿದರು.
Advertisement
ಸಭೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಕುಮಾರ ಬಂಗಾರಪ್ಪ, ಅಶೋಕ್ ನಾಯ್ಕ್, ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಬೋಜೇಗೌಡ, ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿ.ಪಂ.ಸಿಇಒ ಎಂ.ಎಲ್.ವೈಶಾಲಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್