ಬೆಂಗಳೂರು: ರೈತ ಸಂಘದ ಮಧ್ಯೆ ಮಹಾ ಬಿರುಕು ಉಂಟಾಗಿದ್ದು, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಳಸಾ ಬಂಡೂರಿ ರೈತರು ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ ಗೆ ಬಂದಿಳಿದ ಮಹದಾಯಿ, ಕಳಸಬಂಡೂರಿ ರೈತರು ಸಂಪೂರ್ಣ ಸಾಲಮನ್ನಾ ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಬೆಂಗಳೂರು ಚಲೋ ನಡೆಸಿದ್ದಾರೆ.
Advertisement
Advertisement
ಈ ವೇಳೆ ಕೋಡಿಹಳ್ಳಿ ರೈತ ಮುಖಂಡರೇ ಅಲ್ಲ, ಕೋಡಿಹಳ್ಳಿ ಬೆಂಗಳೂರಿನಲ್ಲಿ ಕೂತು ರಾಜಕೀಯ ಮಾಡ್ತಾರೆ. ಕೋಡಿಹಳ್ಳಿ ಒಂದು ಸಂಘಟನೆ ಮಾಡಲಿ, ಅದು ಬಿಟ್ಟು ರಾಜಕೀಯ ಬಿಟ್ಟು ಬಿಡಲಿ. ಮೊನ್ನೆ ನಡೆದ ಹೋರಾಟಕ್ಕೂ ಕರೆದಿಲ್ಲ. ರಾಷ್ಟ್ರಪತಿಗಳ ಭೇಟಿ ಸಂದರ್ಭದಲ್ಲಿ ಈ ಹಿಂದೆ ರೈತರಿಂದ ದುಡ್ಡು ಕಲೆಕ್ಟ್ ಮಾಡಿದ್ರು. ಅವರ್ಯಾಕೆ ದುಡ್ಡು ವಸೂಲಿ ಮಾಡಬೇಕು? ಕೋಡಿಹಳ್ಳಿ ರಾಜಕೀಯ ಮಾಡುತ್ತಿದ್ದಾರೆ. ಇಂತಹ ಹೋರಾಟಗಾರರ ಅವಶ್ಯಕತೆ ನಮಗಿಲ್ಲ ಅಂತ ಕೋಡಿಹಳ್ಳಿ ವಿರುದ್ಧ ರೈತರು ಕಿಡಿಕಾರಿದ್ದಾರೆ.
Advertisement
Advertisement
ಚಳಿಗಾಲ ಅಧಿವೇಶನ ಸಮಯದಲ್ಲೂ ಪ್ರತಿ ರೈತರಿಂದ ಆರುನೂರು ರೂ. ತೆಗೆದುಕೊಂಡು ಒಂದು ದಿನ ಚಳಿಗಾಲ ಅಧಿವೇಶನ ನಡೆದಾಗ ಪ್ರತಿಭಟನೆ ಮಾಡಿ ಆರೆಸ್ಟ್ ಆಗಿ ನಾಟಕ ಮಾಡ್ತಾರೆ. ಇನ್ನು 21 ರಂದು ಹಾವೇರಿಯಲ್ಲಿ ನಡೆಯುವ ಸಮಾವೇಶ ಘೇರಾವ್ ಹಾಕುವ ಎಚ್ಚರಿಕೆಯನ್ನು ರೈತ ಸಂಘ ನೀಡಿದೆ. ಒಟ್ಟಿನಲ್ಲಿ ಸಾಲಮನ್ನಾದ ಹೋರಾಟದ ಮಧ್ಯೆಯೇ ರೈತರ ಮಧ್ಯೆ ಬಿರುಕು ಮೂಡಿದ್ದು, ಕೋಡಿಹಳ್ಳಿ ವಿರುದ್ಧ ಆಕ್ರೋಶ ಸ್ಫೋಟಗೊಂಡಿರುವುದು ಅಚ್ಚರಿ ಮೂಡಿಸಿದೆ.
ಮೂರು ಪಕ್ಷದ ನಾಯಕರನ್ನ ಭೇಟೆ ಮಾಡ್ತೆವೆ ನಮಗೆ ನ್ಯಾಯ ದೊರಕಿಸಿ ಕೊಡಲಿ. ಸಿಎಂ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಯಡಿಯೂರಪ್ಪ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯರನ್ನ ಭೇಟಿ ಮಾಡ್ತೆವೆ. ಕುಮಾರಸ್ವಾಮಿ ಸಂಪೂರ್ಣ ಸಾಲಮನ್ನಾ ಮಾಡ್ತೀವಿ ಅಂತಾ ಹೇಳಿದ್ರು ಅದರಂತೆ ಮಾಡಲಿ. ಸಾಲಮನ್ನಾ, ಮಹಾದಾಯಿ ಯೋಜನೆ ಜಾರಿ ಮಾಡೋವರೆಗೂ ನಮ್ಮ ಹೋರಾಟ ನಿಲ್ಲಲ್ಲ. ಕೇಂದ್ರಸರ್ಕಾರದ ಫಸಲ ಭೀಮ ಯೋಜನೆಯಿಂದ ಸರಿಯಾಗಿ ದುಡ್ಡು ಬರ್ತಿಲ್ಲ. ಹಣ ಬಂದಿದ್ದರು ಅಧಿಕಾರಿಗಳು ಹಣ ನುಂಗುತ್ತಿದ್ದಾರೆ. ನಮ್ಮ ರೈತರು ಸಾಕಷ್ಟು ಜನ ಬರುತ್ತಿದ್ದಾರೆ ನಮ್ಮ ಬೇಡಿಕೆ ಈಡೇರುವರೆಗೂ ಹೊರಾಟ ಮಾಡ್ತಿವಿ ಅಂತ ರೈತರು ಧಿಕ್ಕಾರ ಕೂಗುತ್ತಿದ್ದಾರೆ.