ಚಿಕ್ಕಬಳ್ಳಾಪುರ: ಕೃಷಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ಪ್ರತಿನಿಧಿಸುವ ಕ್ಷೇತ್ರದಲ್ಲೇ ಪರಿಹಾರ ನೀಡಿಲ್ಲ. ಅನ್ಯಾಯವಾಗಿದೆ ಎಂದು ಆರೋಪಿಸಿ ಗೌರಿಬಿದನೂರಿನ ರೈತರು ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಜಿಲ್ಲೆಯ ಗೌರಿಬಿದನೂರು ತಾಲೂಕು ಕಚೇರಿ ಎದುರು ಪವರ್ ಗ್ರಿಡ್ ಯೋಜನೆಯಿಂದ ಬೇಸತ್ತ ರೈತರು ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಪವರ್ ಗ್ರಿಡ್ ಕಾರ್ಪೋರೇಷನ್ ಹೈಟೆನ್ಷನ್ ವಿದ್ಯುತ್ ಟವರ್ ನಿರ್ಮಾಣ ಕಾಮಗಾರಿ ನಡೆಸಲು ಮುಂದಾಗಿದೆ.
Advertisement
Advertisement
ಈ ಕಾಮಗಾರಿಯಿಂದ ಜಮೀನು ಕಳೆದುಕೊಳ್ಳುತ್ತಿರುವ ಸಂತ್ರಸ್ತರಿಗೆ ಕೆಪಿಟಿಸಿಎಲ್ ಮಾದರಿಯಲ್ಲೇ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಜಿಲ್ಲೆಯ ರೈತರು ಈ ಹಿಂದೆ ನಿರಂತರವಾಗಿ ತಾಲೂಕು ಕಚೇರಿ ಎದುರು ಅನಿರ್ಧಿಷ್ಟವಧಿ ಧರಣಿ ನಡೆಸಿದ್ದರು. ಆದರೆ ಈ ಧರಣಿಗೆ ಯಾವೊಬ್ಬ ಅಧಿಕಾರಿಯಿಂದ ಸ್ಪಂದನೆ ಸಿಕ್ಕಿಲ್ಲ.
Advertisement
ಧರಣಿ ನಡೆಸಿದರೂ ಕೂಡ ಸಮಸ್ಯೆ ಮಾತ್ರ ಬಗೆಹರಿಯಲಿಲ್ಲ. ಆದರಿಂದ ಸೂಕ್ತ ಪರಿಹಾರ ನೀಡಿ ಎಂದು ಆಗ್ರಹಿಸಿ ರೈತರು ಮತ್ತೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ನಮಗೆ ಪರಿಹಾರ ನೀಡುವವರೆಗೂ ಸತ್ಯಾಗ್ರಹ ಮಾಡುತ್ತಲೇ ಇರುತ್ತೇವೆ ಅಂತ ರೈತರು ಆಕ್ರೋಶ ಹೊರಹಾಕಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv