ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯವಾಗಿದ್ದು, ರೈತರು ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಿದ್ದಾರೆ.
#WATCH | Farmers leave their site of protest, Singhu border (Delhi-Haryana border), after suspending their year-long protest against the 3 farm laws & other related issues pic.twitter.com/cts0zl4R4w
— ANI (@ANI) December 11, 2021
Advertisement
ಕಳೆದ 15 ತಿಂಗಳಿಂದ ದೆಹಲಿಯ ಗಡಿಭಾಗಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ನಿಲ್ಲಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಇಂದು (ಡಿ.11ರಂದು) ಪ್ರತಿಭಟನಾ ಸ್ಥಳಗಳಿಂದ ತಮ್ಮ ಊರುಗಳಿಗೆ ತೆರಳುತ್ತೇವೆ. ವಿಜಯೋತ್ಸವ ದಿನ ಆಚರಿಸಿ ಊರುಗಳಿಗೆ ತೆರಳುವುದಾಗಿ ರೈತ ಸಂಘಟನೆಗಳು ತಿಳಿಸಿದ್ದವು. ಆದರೆ ಇತ್ತೀಚೆಗೆ ತಮಿಳುನಾಡಿನ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಸಾವಿಗೀಡಾಗಿದ್ದರು. ದುರಂತದಲ್ಲಿ ಮಡಿದ ಯೋಧರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ರೈತರು ವಿಜಯೋತ್ಸವವನ್ನು ಮುಂದೂಡಿದ್ದಾರೆ. ದೆಹಲಿ ಗಡಿಭಾಗಗಳಿಂದ ರೈತರು ಮನೆಗೆ ತಿಂದಿರುಗುತ್ತಿದ್ದಂತೆ, ಪೊಲೀಸರು ಬ್ಯಾರಿಕೇಡ್‍ಗಳನ್ನು ತೆರವುಗೊಳಿಸುತ್ತಿದ್ದಾರೆ.ಇದನ್ನೂ ಓದಿ: ದೆಹಲಿಯಲ್ಲಿ ರೈತರ ಪ್ರತಿಭಟನೆ ಅಂತ್ಯ
Advertisement
Advertisement
ರೈತರು ಟ್ರ್ಯಾಕ್ಟರ್ ಮೂಲಕವಾಗಿ ತಮ್ಮ ಮನೆಗಳಿಗೆ ತೆರಳುತ್ತಿದ್ದಾರೆ. ರೈತರನ್ನು ಸ್ವಾಗತಿಸಲು ಹೆದ್ದಾರಿಗಳ ಉದ್ದಕ್ಕೂ ವಿಶೇಷ ವ್ಯವಸ್ಥೆಯನ್ನು ಸಂಬಂಧಿಕರು ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಗುರುವಾರ ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ ನಂತರ ಕೆಲ ರೈತರು ಈಗಾಗಲೇ ತಮ್ಮ ಗ್ರಾಮಗಳಿಗೆ ತೆರಳಲು ಪ್ರಾರಂಭಿಸಿದ್ದಾರೆ. ಆದರೆ ಎಲ್ಲಾ ರೈತರು ವಾಪಸ್ಸಾಗಲು 4ರಿಂದ 5 ದಿನಗಳ ಸಮಯ ಬೇಕಾಗುತ್ತದೆ. ನಾನು ಡಿಸೆಂಬರ್ 15 ರಂದು ಹೊರಡುತ್ತೇನೆ ಎಂದು ರೈತರ ಪ್ರತಿಭಟನೆ ನೇತೃತ್ವ ವಹಿಸಿದ್ದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ಮುಂದುವರಿಯಲಿದೆ: ನಾಳೆ ಮತ್ತೆ ರೈತರ ಸಭೆ
Advertisement
Protesting farmers at Tikri border dismantle their settlements as they vacate the area to return to their homes, following the suspension of their year-long protest. pic.twitter.com/hiZ8x9if32
— ANI (@ANI) December 11, 2021
ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‍ಪಿ) ಕಾನೂನು ಖಾತರಿ, ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ದಾಖಲಿಸಿರುವ ಅಪರಾಧ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಒತ್ತಾಯಿಸಿದ್ದರು. ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಭರವಸೆಯ ಹೊಸ ಪ್ರಸ್ತಾಪಗಳನ್ನು ರೈತರಿಗೆ ನೀಡಿತ್ತು. ರೈತರ ಸುದೀರ್ಘ ಹೋರಾಟಕ್ಕೆ ಜಯ ಸಿಕ್ಕಿದ್ದು, ತಮ್ಮ ಊರುಗಳಿಗೆ ವಾಪಸ್ಸಾಗುತ್ತಿದ್ದಾರೆ. ಇದನ್ನೂ ಓದಿ: ಟೊಮೆಟೊ ಕದ್ದ ಖಾಕಿ ಸಮವಸ್ತ್ರಧಾರಿ – ವೀಡಿಯೋ ವೈರಲ್