ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ, ಹೊಟ್ಯಾಪುರ ಮತ್ತು ಬೀರಗೊಂಡನಹಳ್ಳಿಯಲ್ಲಿ ದಿಢೀರನೆ ಮೊಸಳೆಗಳು ಪ್ರತ್ಯಕ್ಷಗೊಂಡಿವೆ. ಇದರಿಂದಾಗಿ ಸದ್ಯ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಜಿಲ್ಲೆಯ ತುಂಗಾಭದ್ರ ನದಿ ಮೈದುಂಬಿ ಹರಿಯುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಆದರೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ, ಹೊಟ್ಯಾಪುರ ಮತ್ತು ಬೀರಗೊಂಡನಹಳ್ಳಿಯಲ್ಲಿ ಮೊಸಳೆ ಕಾಣಿಸಿಕೊಂಡಿವೆ. ಹೀಗಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ತುಂಗಾಭದ್ರಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಭದ್ರಾವತಿ ಭಾಗದಿಂದ ಮೊಸಳೆಗಳು ಬಂದಿವೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ನದಿ ದಡದಲ್ಲಿ ಬೀಡು ಬಿಟ್ಟಿರುವ ಮೊಸಳೆಗಳು ಜನರ ಮೇಲೆ ದಾಳಿ ಮಾಡಲು ಮುಂದಾಗುತ್ತಿವೆ. ಹೀಗಾಗಿ ಗ್ರಾಮಸ್ಥರು ಗದ್ದೆಗಳಿಗೆ ಹೋಗಲು ಭಯಪಡುತ್ತಿದ್ದಾರೆ.
ಇನ್ನು ಮೊಸಳೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳಿಗೆ ಮೊಸಳೆಗಳನ್ನು ಹಿಡಿಯುವಂತೆ ಆಗ್ರಹಿಸುತ್ತಿದ್ದಾರೆ.