ಬೆಂಗಳೂರು: ರೈತರ ಸಾಲಮನ್ನಾ ಮಾಡದಿದ್ದರೇ ಸೋಮವಾರ ಕರ್ನಾಟಕ ಬಂದ್ ಮಾಡುವ ವಿಚಾರದ ಬಗ್ಗೆ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಇಡೀ ರಾಜ್ಯದಲ್ಲಿ ಬಂದ್ ಮಾಡಬೇಕು ಎಂದು ರೈತ ಮುಖಂಡರು ಹೊರಟಿದ್ದಾರೆ. ರೈತರೇ ಸ್ವಯಂಪ್ರೇರಿತರಾಗಿ ಆಗಿ ಬಂದ್ ಮಾಡುತ್ತಿದ್ದಾರೆ. ಬಿಜೆಪಿ ಬಂದ್ ಎನ್ನುವುದಕ್ಕಿಂತ ರೈತರೇ ಬಂದ್ ಮಾಡುತ್ತಾರೆ ಎಂದು ಬಿಎಸ್ವೈ ತಿಳಿಸಿದ್ದಾರೆ.
Advertisement
ಶುಕ್ರವಾರ ಸಂಜೆಯೊಳಗೆ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕರೆ ನೀಡಿದ್ದರು.
Advertisement
Advertisement
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸದನದಲ್ಲಿ ವಿಶ್ವಾಸ ಮತಯಾಚನೆ ವೇಳೆ ಮಾತನಾಡಿದ ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭಾಷಣ ಮಾಡಿದರು. ಅಲ್ಲದೇ ಸಂಜೆಯೊಳಗೆ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿ ಸಭಾತ್ಯಾಗ ಮಾಡಿದರು. ಬಿಎಸ್ವೈ ಜೊತೆ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.
Advertisement
ನಮಗೆ ಎಲ್ಲಾ ಕಡೆಯಿಂದ ಒತ್ತಡ ಬರುತ್ತಿದೆ. ಆದ್ದರಿಂದ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡಬೇಕು. ಇಲ್ಲವಾದರೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿ ಸಭಾತ್ಯಾಗ ಮಾಡಿದ್ದರು.
ಹಿರಿಯರು ಮತ್ತು ಗರ್ಭಿಣಿಯರಿಗೂ ಕುಮಾರಸ್ವಾಮಿಯವರು ಭರವಸೆ ನೀಡಿದ್ದಾರೆ. ನೀರಾವರಿಗೆ 1 ಲಕ್ಷ ಕೋಟಿ ಮೀಸಲು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಇದೆಲ್ಲಾ ನೀವು ಯಾವಾಗ ಈಡೇರಿಸುತ್ತೀರಿ ಎಂದು ಬಿಎಸ್ವೈ ಪ್ರಶ್ನಿಸಿದ್ದರು.