-ಮುಸ್ಲಿಮರ ಸಾರ್ವಜನಿಕ ಪ್ರಾರ್ಥನೆಗಳಿಗೆ ಅವಕಾಶ ನೀಡಲೇಬೇಕು
ಶ್ರೀನಗರ: ಪಾಕ್‍ನೊಂದಿಗೆ ಯಾವುದೇ ಮಾತುಕತೆ ಇಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತ್ಯಗೊಳಿಸಲು ಸಾಧ್ಯವಿಲ್ಲ. ಉಗ್ರವಾದವನ್ನು ಕೊನೆಗಾಣಿಸಲು ಬೇರೆ ದಾರಿಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
Advertisement
ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರಿಗೆ ಸುರಕ್ಷತೆ ಇಲ್ಲ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರು ಹೇಗೆ ಸುರಕ್ಷಿತವಾಗಿರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಡುರಾತ್ರಿ ಕಾರು ಹಿಂಬಾಲಿಸಿ ಅಪರಿಚಿತನ ಕಿರಿಕ್ – ಪುಂಡನ ಪುಂಡಾಟಕ್ಕೆ ಇಡೀ ಕುಟುಂಬ ಹೈರಾಣು
Advertisement
Advertisement
ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂಬ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಬ್ದುಲ್ಲಾ, ದೇಶದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ದೇಶದಲ್ಲಿ ಧಾರ್ಮಿಕ ಸಹಿಷ್ಣುತೆ ಇರುವುದರಿಂದ ಮುಸ್ಲಿಮರ ಸಾರ್ವಜನಿಕ ಪ್ರಾರ್ಥನೆಗಳಿಗೆ ಅವಕಾಶ ನೀಡಲೇಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪತಿಗೆ ಡೈವೋರ್ಸ್ ಕೊಡು, ಮುಸ್ಲಿಂ ಯುವಕನ ಜೊತೆ ಮದುವೆ ಮಾಡಿಸ್ತೀನಿ – ನೂರ್ ಜಹಾನ್ ಅರೆಸ್ಟ್