ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲ್ಲ: ಫಾರೂಕ್ ಅಬ್ದುಲ್ಲಾ

Public TV
1 Min Read
Farooq Abdullah 4

ಶ್ರೀನಗರ: ರಾಷ್ಟ್ರಪತಿ ಸ್ಥಾನದ ಚುನಾವಣೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ನ್ಯಾಷನಲ್ ಕಾನ್ಪರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ತಿರಸ್ಕರಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಫಾರೂಕ್ ಅಬ್ದುಲ್ಲಾ ಅವರ ಹೆಸರನ್ನು ಸೂಚಿಸಿದ್ದರು. ಆದರೆ ಫಾರೂಕ್ ಅಬ್ದುಲ್ಲಾ ಈ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ ಹಾಗೂ ಜಮ್ಮು-ಕಾಶ್ಮೀರಕ್ಕೆ ಕೊಡುಗೆ ನೀಡಲು ಬಯಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

Farooq Abdullah

ಜಮ್ಮು ಮತ್ತು ಕಾಶ್ಮೀರದ ಈಗಿನ ಪರಿಸ್ಥಿತಿಯಲ್ಲಿ ನನ್ನ ಸಹಕಾರದ ಅಗತ್ಯವಿದೆ. ಮುಂದೆ ನನಗೆ ರಾಜಕೀಯದಲ್ಲಿ ಹಾಗೂ ಸೇವೆಯಲ್ಲಿ ಹೇರಳ ಅವಕಾಶವಿದೆ. ಹೀಗಾಗಿ ನಾನು ರಾಷ್ಟ್ರಪತಿ ಚುನಾವಣೆಗೆ ನನ್ನ ಹೆಸರನ್ನು ಹಿಂಪಡೆಯಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಅಭಾವ – ಮುಂದಿನ ವಾರದಿಂದಲೇ ಶಾಲೆಗಳು ಬಂದ್

ಕೆಲವು ದಿನಗಳ ಹಿಂದೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪದಿಂದ ಹಿಂದೇಟು ಹಾಕಿದ್ದರು. ಇದೀಗ ಫಾರೂಕ್ ಅಬ್ದುಲ್ಲಾ ಸ್ಪರ್ಧೆಗೆ ಹಿಂದೆ ಸರಿದಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *