ನವದೆಹಲಿ: ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಅಪರಾಧಿಗಳಿಗೆ ತ್ವರಿತವಾಗಿ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಲು ಫಾಸ್ಟ್-ಟ್ರ್ಯಾಕ್ ಕೋರ್ಟ್(Fast-Track Courts) ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ.
ದೇಶಾದ್ಯಂತ ನೀಟ್’ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಜಂತರ್ ಮಂತರ್‌ನಲ್ಲಿ(Jantar Mantar) ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮೌನ ಮುರಿದ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಹೊರಗಿನಿಂದ ಗೂಂಡಾಗಳನ್ನು ಕಳುಹಿಸಿ ಬಿಜೆಪಿ ಕಲ್ಲು ತೂರಾಟ ನಡೆಸುತ್ತಿದೆ: ಅಭಿಜಿತ್ ದೀಪ್ಕೆ
Nothing is more important than the welfare and future of our youth!
We have decided to set up fast-track courts to ensure swift and stringent punishment for those involved in paper leaks. Have directed the concerned authorities and officials to take all necessary steps in this…
— Narendra Modi (@narendramodi) July 23, 2026
ಪೋಸ್ಟ್‌ನಲ್ಲಿ ಏನಿದೆ?
ನಮ್ಮ ಯುವಜನತೆಯ ಭವಿಷ್ಯ ಮತ್ತು ಕ್ಷೇಮಾಭಿವೃದ್ಧಿಗಿಂತ ನಮಗೆ ಬೇರೇನೂ ಮುಖ್ಯವಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಅತ್ಯಂತ ವೇಗವಾಗಿ ಮತ್ತು ಕಠಿಣವಾದ ಶಿಕ್ಷೆ ಸಿಗುವಂತೆ ಮಾಡಲು ‘ಫಾಸ್ಟ್-ಟ್ರ್ಯಾಕ್’ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಜಂತರ್ ಮಂತರ್‌ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ- ಇಂಟರ್‌ನೆಟ್ ಬಂದ್
ನಮ್ಮ ಯುವಕರ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡಲು ಯತ್ನಿಸುವ ಯಾವುದೇ ವ್ಯಕ್ತಿಯನ್ನು ಅಥವಾ ಶಕ್ತಿಯನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
