ಬೆಂಗಳೂರು: ಫಾಸ್ಟ್ ಟ್ಯಾಗ್ ಅಳವಡಿಸಲು ಕೇವಲ ಐದೇ ದಿನ ಬಾಕಿಯಿದೆ.
ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ಸಂಚರಿಸುವ ಶೇ. 60ರಷ್ಟು ವಾಹನಗಳು ಫಾಸ್ಟ್ ಟ್ಯಾಗ್ ಅಳವಡಿಸಿಕೊಂಡಿದ್ದು, ಅಂತಿಮ ಗಡುವಿಗೆ ಬಾಕಿ ಉಳಿದ ಐದು ದಿನಗಳಲ್ಲಿ ಶೇ.25ರಷ್ಟು ವಾಹನಗಳು ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳುವುದು ಬಾಕಿಯಿದೆ.
Advertisement
ಕೇಂದ್ರ ಸರ್ಕಾರ ಫಾಸ್ಟ್ ಟ್ಯಾಗ್ ಅಳವಡಿಕೆ ನೀಡಿದ್ದ ಗಡುವು ವಿಸ್ತರಣೆ ಐದು ದಿನಗಳಲ್ಲಿ (ಜ.15) ಮುಕ್ತಾಯವಾಗಲಿದೆ. ಈ ಅವಧಿಯಲ್ಲಿ ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳದಿದ್ದರೆ ಕ್ಯಾಶ್ ಲೈನ್ ನಲ್ಲಿ ಮಾತ್ರ ಸಂಚರಿಸಬೇಕು.
Advertisement
Advertisement
ರಾಜ್ಯದಲ್ಲಿ ಫಾಸ್ಟ್ ಟ್ಯಾಗ್‍ಗೆ ಬೇಡಿಕೆ ಕಡಿಮೆಯಾಗಿದೆ. ಟೋಲ್ ಪ್ಲಾಜಾಗಳಲ್ಲಿ ತೆರೆದಿರುವ ಫಾಸ್ಟ್ ಟ್ಯಾಗ್ ಸೆಂಟರ್ ಗಳು, ಬ್ಯಾಂಕ್‍ಗಳು, ಆನ್‍ಲೈನ್ ಮಾರ್ಕೆಟ್‍ನಲ್ಲಿ ಫಾಸ್ಟ್ ಟ್ಯಾಗ್ ಗೆ ಬೇಡಿಕೆ ಇಳಿಮುಖವಾಗಿದೆ. ಡಿಸೆಂಬರ್ 15ರ ವೇಳೆಗೆ ರಾಜ್ಯದಲ್ಲಿ ಶೇ.40ರಷ್ಟಿದ್ದ ಫಾಸ್ಟ್ ಟ್ಯಾಗ್ ಅಳವಡಿಕೆ ಪ್ರಮಾಣ ಕಳೆದ 25 ದಿನಗಳಲ್ಲಿ ಶೇ. 20ರಷ್ಟು ಹೆಚ್ಚಾಗಿದೆ. ಅಂದರೆ ಇವರೆಗೆ ರಾಜ್ಯದಲ್ಲಿ ಒಟ್ಟು ಶೇ.60ರಷ್ಟು ಫಾಸ್ಟ್ ಟ್ಯಾಗ್ ಅಳವಡಿಕೆಯಾಗಿದೆ.
Advertisement
ವಾಹನಗಳಿಗೆ ಫಾಸ್ಟ್ ಟ್ಯಾಗ್ ಸ್ಟಿಕರ್ ಅಳವಡಿಕೆ ನಿರೀಕ್ಷಿತ ಮಟ್ಟಕ್ಕೆ ಮುಟ್ಟಿಲ್ಲ. ಆದರೂ ಇನ್ನೈದು ದಿನಗಳಲ್ಲಿ ಫಾಸ್ಟ್ ಟ್ಯಾಗ್ ವಾಹನಗಳ ಸಂಖ್ಯೆ ಶೇ.80ಕ್ಕೆ ಏರಿಕೆಯಾಗಲಿದೆ ಎಂದು ಅಧಿಕಾರಿಗಳು ಭರವಸೆ ವ್ಯಕ್ತಪಡಿಸಿದ್ದಾರೆ. ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳ ಸಂಚಾರಕ್ಕೆ ಟೋಲ್ ಪ್ಲಾಜಾಗಳಲ್ಲಿ ಒಂದು ಪಥ ಮೀಸಲಿಡಲು ಹೆದ್ದಾರಿ ಪ್ರಾಧಿಕಾರ ಚಿಂತನೆ ನಡೆಸಿದೆ.