ಶಿವಮೊಗ್ಗ: ಕಾರು, ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಬೈಕ್ ಸವಾರರು ಗಾಯಗೊಂಡ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ (Ripponpet) ಸಮೀಪದ ಸೂಡೂರು ಗೇಟ್ ಬಳಿ ಸಂಭವಿಸಿದೆ.
ರಿಪ್ಪನ್ ಪೇಟೆಯಿಂದ ಶಿವಮೊಗ್ಗದ ಕಡೆ ಕಾರು ತೆರಳುತ್ತಿತ್ತು. ಶಿವಮೊಗ್ಗದಿಂದ (Shivamogga) ರಿಪ್ಪನ್ ಪೇಟೆ ಕಡೆ ಬೈಕ್ ಸವಾರರು ತೆರಳುತ್ತಿದ್ದರು. ಬೈಕ್‌ನಲ್ಲಿ ಮೂರು ಮಂದಿ ಯುವಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಇದನ್ನೂ ಓದಿ: ಉಡುಪಿ| ಸ್ಟಾರ್ ಹೋಟೆಲ್‌ಗಳಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ ವೃದ್ಧ ಸೆರೆ
ಮೃತ ಬೈಕ್ ಸವಾರ ರಿಪ್ಪನ್ ಪೇಟೆ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಲೋಕಸಭೆಯಲ್ಲಿ ರೈಲ್ವೇ ತಿದ್ದುಪಡಿ ಮಸೂದೆ 2024 ಅಂಗೀಕಾರ