ಹಾಸನ: ಸಾರಿಗೆ ಬಸ್ ಹಾಗೂ ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಸಕಲೇಶಪುರ (Sakleshpura) ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.
ದಿನೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಐಸಿಐಸಿಐ ಬ್ಯಾಂಕ್‌ಗೆ ಸೇರಿದ ಬೊಲೆರೋ ಪಿಕಪ್ ವಾಹನ ಎಟಿಎಂಗಳಿಗೆ ಹಣ ತುಂಬಲು ಬರುತ್ತಿತ್ತು. ಈ ವೇಳೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ತಿಹಾರ್ ಜೈಲಿಂದಲೇ ಪತ್ನಿಗೆ ವಿಚ್ಚೇಧನ ನೀಡಲು ಮುಂದಾದ ಲಿಬರೇಶನ್ ಫ್ರಂಟ್ ಮುಖ್ಯಸ್ಥ ಯಾಸಿನ್ ಮಲಿಕ್
ಗಾಯಾಳುಗಳು ಕೊಡಗು ಹಾಗೂ ಮಂಗಳೂರು ಮೂಲದವರು. ಸದ್ಯ ಗಾಯಾಳುಗಳಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ದುನಿಯಾ ವಿಜಯ್ – ನಾಗರತ್ನ ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು; 2 ಕೋಟಿ ಜೀವನಾಂಶಕ್ಕೆ ಆದೇಶ
