ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ – ತಂದೆ, ಮೂವರು ಮಕ್ಕಳು ಸಾವು

Public TV
1 Min Read
Udupi Accident

-ಪತ್ನಿ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ಉಡುಪಿ: ಬೈಕ್‌ಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ (Udupi) ಜಿಲ್ಲೆ ಕಾರ್ಕಳದ (Karkala) ನಲ್ಲೂರಿನಲ್ಲಿ (Nallur) ನಡೆದಿದೆ.

ಸುರೇಶ್ ಆಚಾರ್ಯ (36), ಸುಮಿಕ್ಷಾ (7), ಸುಶ್ಮಿತಾ (5) ಹಾಗೂ ಸುಶಾಂತ್ (2) ಮೃತ ದುರ್ದೈವಿಗಳು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಶ್ಮಿತಾ ಚಿಕಿತ್ಸೆ ನೀಡುತ್ತಿದ್ದ ಸಂದರ್ಭ ಮೃತಪಟ್ಟಿದ್ದಾಳೆ. ಬೈಕ್‌ನಲ್ಲಿ ಪತಿ, ಪತ್ನಿ ಹಾಗೂ 3 ಮಕ್ಕಳು ಇದ್ದರು. ಪಾಜೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: MUDA Case: ಸಿಎಂಗೆ ಮತ್ತೊಂದು ಸಂಕಷ್ಟ – ಸಿದ್ದರಾಮಯ್ಯ ವಿರುದ್ಧ ED ಎಫ್‌ಐಆರ್‌ ಸಾಧ್ಯತೆ

ಭೀಕರ ರಸ್ತೆ ಅಪಘಾತದಲ್ಲಿ ಪತ್ನಿ ಮೀನಾಕ್ಷಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಮೂಲದವರು ಎಂದು ತಿಳಿದುಬಂದಿದೆ. ವೇಣೂರಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಲಾರಿ ಚಾಲಕನ ಅಜಾಗರೂಕತೆ, ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್‌, ಕಟೀಲ್‌ ವಿರುದ್ಧ FIR – ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

Share This Article