ತುಮಕೂರು: ಪ್ರೀತಿ (Love) ಪ್ರೇಮದ ಬಲೆಗೆ ಬಿದ್ದು ಮನೆತನದ ಗೌರವ ಬೀದಿಪಾಲು ಮಾಡಿದ್ದಾಳೆ ಎಂದು ಬೇಸರದಿಂದ ಸ್ವತಃ ತಂದೆಯೇ (Father) ಅಪ್ರಾಪ್ತ ಮಗಳನ್ನು (Daughter) ಹತ್ಯೆ ಮಾಡಿದ ಘಟನೆ ತುಮಕೂರಲ್ಲಿ (Tumakuru) ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಿರಾ (Sira) ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ತಿಮ್ಮರಾಯಪ್ಪ ಬಂಧಿತ ಆರೋಪಿ. ಶಿರಾ ತಾಲೂಕು ನಿಂಬೆ ಮರದಹಳ್ಳಿಯ ಮೇಘನ (17) ಎಂಬಾಕೆ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಾಯಿ ತಿಂಗಳ ಹಿಂದೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆ ಬಾಲಕಿಯ ತಂದೆ ತಲೆ ಮರೆಸಿಕೊಂಡಿದ್ದ. ಆತನ ಪತ್ತೆಗೆ ತೀವ್ರ ಹುಡುಕಾಟ ನಡೆಸಿದ ಪೊಲೀಸರು ಕೊನೆಗೂ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಮಗಳನ್ನು ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಮಾಸ್ಕೋ ಮೇಲೆ ಉಕ್ರೇನ್ ಡ್ರೋನ್ ದಾಳಿ – ಓರ್ವ ಭಾರತೀಯ ಸಾವು, ಮೂವರಿಗೆ ಗಂಭೀರ ಗಾಯ
ಮಗಳು ಮೇಘನ ತನ್ನ ತಾಯಿ ಕಡೆಯ ಸಂಬಂಧಿಯೋರ್ವನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಳು, ಮಗಳು ಚಿಕ್ಕವಳಾದ್ದರಿಂದ ತಂದೆ ತಿಮ್ಮರಾಯಪ್ಪ ಮಗಳ ಪ್ರೇಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ ತಂದೆ-ಮಗಳ ನಡುವೆ ಮನೆಯಲ್ಲಿ ಅನೇಕ ಬಾರಿ ಜಗಳಗಳು ನಡೆದಿದ್ದವು. ಏಪ್ರಿಲ್ 16ರಂದು ಕೂಡ ಜಗಳವಾಗಿದ್ದು, ಮಗಳು ಮಾತು ಕೇಳುತ್ತಿಲ್ಲ ಎಂದು ಕೋಪಗೊಂಡ ತಿಮ್ಮರಾಯಪ್ಪ ಆಕೆಯನ್ನು ಕೊಲೆ ಮಾಡಿ ತನ್ನ ಜಮೀನಿನ ಪಕ್ಕದ ಸರ್ಕಾರಿ ಹಳ್ಳದಲ್ಲಿ ಶವವನ್ನು ಹೂತು ಹಾಕಿದ್ದಾನೆ. ಇದನ್ನೂ ಓದಿ: IPL Playoffs | ಆರ್‌ಸಿಬಿ ತಂಡದ `ಗೇಮ್ ಚೇಂಜರ್ʼ ಹೇಜಲ್‌ವುಡ್
ಈ ನಡುವೆ ಮಗಳು ಕಾಣೆಯಾಗಿದ್ದಾಳೆಂದು ತಾಯಿ ನಾಪತ್ತೆ ದೂರು ದಾಖಲಿಸಿದ್ದರು. ಕಳ್ಳಂಬೆಳ್ಳ ಪೊಲೀಸರು ಪ್ರಕರಣ ಭೇದಿಸಿದ್ದು, ಮೇ 18ರಂದು ಮಧುಗಿರಿ ಉಪ ವಿಭಾಗಾಧಿಕಾರಿ ಹಾಗೂ ಶಿರಾ ತಹಸೀಲ್ದಾರ್ ನೇತೃತ್ವದಲ್ಲಿ ಶವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಾಟನ್‌ಪೇಟೆ ಕಾಮುಕನಿಗಾಗಿ ಪೊಲೀಸರಿಂದ ಹುಡುಕಾಟ

