ಆಗ್ರಾ: ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಮನನೊಂದ ವ್ಯಕ್ತಿಯೊಬ್ಬ ನ್ಯಾಯಕ್ಕಾಗಿ ತನ್ನ ನವಜಾತ ಶಿಶುವಿನ ಶವವನ್ನು ಪೊಲೀಸ್ ವರಿಷ್ಠಾಧಿಕಾರಿಯ ಕಚೇರಿಗೆ ತೆಗೆದುಕೊಂಡ ಹೋದ ಘಟನೆ ಆಗ್ರಾದಲ್ಲಿ ನಡೆದಿದೆ.
ಧನಿರಾಮ್ ನ್ಯಾಯಕ್ಕಾಗಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕಚೇರಿಗೆ ಹೋದ ವ್ಯಕ್ತಿ. ಇವರ 6 ತಿಂಗಳ ಗರ್ಭಿಣಿ ಪತ್ನಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ದೂರನ್ನು ಪೊಲೀಸರು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದ ಧನಿರಾಮ್ ನ್ಯಾಯಕ್ಕಾಗಿ ಪೊಲೀಸ್ ವರಿಷ್ಠಾಧಿಕಾರಿಯ ಕಚೇರಿಗೆ ತಲುಪಿದ್ದಾರೆ.
Advertisement
Advertisement
ಘಟನೆಯೇನು?: ಧನಿರಾಮ್ ಅವರ ಗರ್ಭಿಣಿ ಪತ್ನಿಯ ಮೇಲೆ ಇಬ್ಬರು ಪುರುಷರು ಹಲ್ಲೆ ನಡೆಸಿದ್ದರು. ಇದರಿಂದಾಗಿ ಆಕೆ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಾಲಾಗಿತ್ತು. ಅಲ್ಲಿ ಶಸ್ತ್ರ ಚಿಕಿತ್ಸೆ ಮಾಡಿ ಮಗುವನ್ನು ತೆಗೆದಿದ್ದರು. ಆದರೆ ಹುಟ್ಟಿದ ಕೆಲವೇ ದಿನಗಳಲ್ಲಿ ಮಗು ಸಾವನ್ನಪ್ಪಿದೆ.
Advertisement
ಘಟನೆ ಸಂಬಂಧಿಸಿ ಧನಿರಾಮ್ ಹಲ್ಲೆ ನಡೆಸಿದ ಗುಡ್ಡು ಮತ್ತು ರಾಮಸ್ವಾಮಿ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ ಅಧಿಕಾರಿಗಳು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಇದರಿಂದಾಗಿ ಧನಿರಾಮ್ ಸ್ಥಳೀಯ ನಿವಾಸಿಗಳೊಂದಿಗೆ ನವಜಾತ ಮಗಳ ಶವದೊಂದಿಗೆ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ. ಇದನ್ನೂ ಓದಿ: ವ್ಯಕ್ತಿಯನ್ನು ಕೊಂದು, ಅಂತ್ಯಸಂಸ್ಕಾರಕ್ಕೆ ಹಾಜರಾದ ಕಾಡಾನೆ!
Advertisement
ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾಕರ ಚೌಧರಿ ಅವರು ಧನಿರಾಮ್‍ಗೆ ಸಮಾಧಾನ ಮಾಡಿ, ನ್ಯಾಯ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೇ ತಕ್ಷಣವೇ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಫತೇಹಾಬಾದ್‍ನ ಉಪಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದರು.
ಈ ಬಗ್ಗೆ ಮಾತನಾಡಿದ ಧನಿರಾಮ್, ತನ್ನ ಪತ್ನಿ 6 ತಿಂಗಳ ಗರ್ಭಿಣಿಯಾಗಿದ್ದರು. ಆ ಸಂದರ್ಭದಲ್ಲಿ ತಾನು ಮತ್ತು ಆಕೆ ಕೆಲಸಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬ್ಯಾಗ್‍ನಲ್ಲಿ ಏನಿದೆ ಎಂದಿದ್ದಕ್ಕೆ ಬಾಂಬ್ ಇದೆ ಎಂದ ವೃದ್ಧ ಅರೆಸ್ಟ್