Connect with us

Crime

ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ- ರೈಲಿನಡಿ ಬಿದ್ದು ತಂದೆ ಆತ್ಮಹತ್ಯೆ

Published

on

ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು. ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]