Recent News

ಅಪ್ರಾಪ್ತೆ ಮೇಲೆ ತಂದೆಯಿಂದಲೇ ಅತ್ಯಾಚಾರ- 8 ವರ್ಷ ಬಳಿಕ ಆರೋಪಿ ಅರೆಸ್ಟ್

ಶಿಮ್ಲಾ: ಅಪ್ರಾಪ್ತ ಮಗಳ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಹಿಮಾಚಲ ಪ್ರದೇಶದ ಹಮೀರ್ ಪುರ ಜಿಲ್ಲೆಯಲ್ಲಿ ನಡೆದಿದೆ.

17 ವರ್ಷದ ಮಗಳು ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಈ ಪ್ರಕರಣ ಎಂಟು ವರ್ಷಗಳ ಹಿಂದೆಯೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಎಂಟು ವರ್ಷಗಳ ಹಿಂದೆ ತಂದೆ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೆ ಬಲವಂತವಾಗಿ ಪದೇ ಪದೇ ಅತ್ಯಾಚಾರ ಎಸಗಲು ಪ್ರಯತ್ನಿಸುತ್ತಿದ್ದಾನೆ ಎಂದು ಅಪ್ರಾಪ್ತೆ ದೂರಿನಲ್ಲಿ ತಿಳಿಸಿದ್ದಾಳೆ.

ಈ ಸಂಬಂಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಅಡಿ ಬಾರ್ಸರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವಕ್ತಾರರು ವಿವರಿಸಿದ್ದಾರೆ.

Leave a Reply

Your email address will not be published. Required fields are marked *