ರಾಯಚೂರು: ಅತ್ಯಾಚಾರಕ್ಕೆ ಮುಂದಾಗಿದ್ದ ಮಾವನನ್ನು ನಿರಾಕರಿಸಿದ್ದಕ್ಕೆ, ಸೊಸೆಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ (Raichuru) ಜುಲಮಗೇರಾ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ದುಳ್ಳಮ್ಮ (27) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹಿಜಬ್ ಧರಿಸದೇ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದಕ್ಕೆ ಇರಾನ್ ಗಾಯಕಿ ಬಂಧನ
Advertisement
Advertisement
ಇದಕ್ಕೂ ಮುಂದೆ 2-3 ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಗ್ರಾಮದ ಹಿರಿಯರು, ಕುಟುಂಬಸ್ಥರು ಆರೋಪಿ ರಾಮಲಿಂಗಯ್ಯಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಈ ಬಾರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಸೊಸೆಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದ. ಈ ವೇಳೆ ಸೊಸೆ ನಿರಾಕರಿಸಿದ್ದು, ಸಲಾಕೆಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಗ್ರಾಮದಿಂದ ಪರಾರಿಯಾಗಿದ್ದಾನೆ.
Advertisement
ಸದ್ಯ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.ಇದನ್ನೂ ಓದಿ: Belagavi| ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣು