ಬೆಳಗಾವಿ: ಕಳೆದ ಮೇ 31ರಂದು ಪಟ್ಟಣದ ಹೊರವಲಯದ ಮಲಪ್ರಭಾ ನದಿತೀರದಲ್ಲಿ ಪತ್ತೆಯಾದ ಅಪರಿಚಿತ ಯುವಕನ ಅಸಹಜ ಸಾವಿನ ಪ್ರಕರಣವನ್ನು ಬೇಧಿಸಿರುವ ಖಾನಾಪುರ (Khanapura) ಠಾಣೆಯ ಪೊಲೀಸರು ಪ್ರಕರಣದ ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ.
ಮಾನಸಿಕವಾಗಿ ಅಸ್ವಸ್ಥನಾಗಿದ್ದ (Mentally Ill) ತನ್ನ ಹಿರಿಯ ಮಗ ಬದುಕಿರುವವರೆಗೆ ಕಿರಿಯ ಮಗನ ಮದುವೆಗೆ ಅಡಚಣೆಯಾಗುತ್ತದೆ ಎಂದು ಭಾವಿಸಿ ತಂದೆಯೇ ತನ್ನ ಹಿರಿಯ ಮಗನಿಗೆ ವಿಷವುಣಿಸಿ ಕೊಲೆಗೈದಿರುವುದಾಗಿ ಪೊಲೀಸರ ತನಿಖೆಯಲ್ಲಿ ಧೃಡಪಟ್ಟಿದೆ. ಬಂಧಿತ ತಂದೆಯನ್ನು ಪೊಲೀಸರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
Advertisement
Advertisement
ಏನಿದು ಘಟನೆ?
ಖಾನಾಪುರ ಪಟ್ಟಣದ ಬಳಿ ಮಲಪ್ರಭಾ ನದಿತೀರದಲ್ಲಿ ಪತ್ತೆಯಾದ ಅಪರಿಚಿತ ಶವದ ಮರಣೋತ್ತರ ತನಿಖೆ ನಡೆಸಿದ್ದ ಪೊಲೀಸರಿಗೆ ಮೃತ ವ್ಯಕ್ತಿ ವಿಷ ಸೇವಿಸಿದ್ದು, ಜೊತೆಗೆ ಆತನ ತಲೆಗೆ ಬಲವಾಗಿ ಪೆಟ್ಟು ಬಿದ್ದಿರುವುದು ತಿಳಿದುಬಂದಿತ್ತು. ಹೀಗಾಗಿ ಪೊಲೀಸರು ಈ ಪ್ರಕರಣವನ್ನು ಅನುಮಾನಾಸ್ಪದ ಸಾವು ಎಂದು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
Advertisement
ಪ್ರಕರಣ ದಾಖಲಾಗಿ ಕೆಲದಿನಗಳ ಬಳಿಕ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಆತ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದ ನಿವಾಸಿ ನಿಖಿಲ್ ರಾಜಕುಮಾರ ಮಗದುಮ್ಮ (24) ಎಂದು ಪೊಲೀಸರಿಗೆ ತಿಳಿದುಬಂದಿತ್ತು. ನಿಖಿಲ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಜುಲೈ 7ರಂದು ಆತನ ಚಿಕ್ಕಪ್ಪ ಸಂತೋಷ್ ಮಗದುಮ್ಮ ಅವರನ್ನು ಠಾಣೆಗೆ ಕರೆಸಿ ವಿಚಾರಿಸಿದಾಗ ಅವರು ತಮ್ಮ ಅಣ್ಣ ರಾಜಕುಮಾರ ಶಂಕರ ಮಗದುಮ್ಮ (45) ನಿಖಿಲ್ ಕೊಲೆ ಮಾಡಿರುವುದಾಗಿ ತಿಳಿಸಿ ರಾಜಕುಮಾರ ವಿರುದ್ಧ ದೂರು ನೀಡಿದ್ದರು. ಇದನ್ನೂ ಓದಿ: ಕಾರು ಹತ್ತಿಸಿ ಮೂವರು ಮಕ್ಕಳ ಕೊಲೆಗೆ ಯತ್ನ!
Advertisement
ರಾಜಕುಮಾರ ಅವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದ ಪೊಲೀಸರು ಅವರನ್ನು ವಿಚಾರಣೆ ನಡೆಸಿದಾಗ ತಮ್ಮ ಹಿರಿಯ ಮಗ ನಿಖಿಲ್ ಮಾನಸಿಕ ಅಸ್ವಸ್ಥನಿದ್ದು, ಆತ ಬದುಕಿರುವವರೆಗೆ ಕಿರಿಯ ಮಗ ನಿತೀಶ್ನ ಮದುವೆ ಮಾಡಲು ತೊಂದರೆ ಆಗುತ್ತದೆ ಎಂದು ಭಾವಿಸಿ ಆತನನ್ನು ಮೇ 30ರಂದು ಬೋರಗಲ್ ಗ್ರಾಮದ ತಮ್ಮ ಮನೆಯಿಂದ ಪಟ್ಟಣದ ಮಲಪ್ರಭಾ ನದಿಯ ಬಳಿ ಕರೆದುಕೊಂಡು ಹೋಗಿ ವಿಷ ಕುಡಿಸಿ, ಗಿಡಕ್ಕೆ ಜೋರಾಗಿ ತಲೆ ಹಾಯಿಸಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಾರೆ.
ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ನಿಖಿಲ್ ಅವರ ಕೊಲೆ ಪ್ರಕರಣವನ್ನು ಬೇಧಿಸಿರುವ ಖಾನಾಪುರ ಠಾಣೆಯ ಪಿಐ ಮಂಜುನಾಥ್ ನಾಯ್ಕ್ ಹಾಗೂ ಸಿಬ್ಬಂದಿ ರಾಜಕುಮಾರ ಶಂಕರ್ ಮಗದುಮ್ಮ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರ ಆದೇಶದನ್ವಯ ರಾಜಕುಮಾರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಹಾವು ಕಚ್ಚಿಸಿ ಉದ್ಯಮಿಯ ಕೊಲೆ – ಸಹಜ ಸಾವೆಂದು ಬಿಂಬಿಸಿದ ಹಾವಾಡಿಗ ಅರೆಸ್ಟ್
Web Stories