ಮೈಸೂರು: ತಂದೆಯೇ ದೊಣ್ಣೆಯಿಂದ ಮಗನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಚೆಲುವರಾಜು (25) ಕೊಲೆಯಾದ ಮಗ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಹಾದನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿ ಸಿದ್ದರಾಜು ದೊಣ್ಣೆಯಿಂದ ಮಗನನ್ನು ಕೊಲೆ ಮಾಡಿ ಮೃತ ದೇಹವನ್ನು ಮನೆಯಲ್ಲೆ ಇರಿಸಿ ಜಮೀನಿಗೆ ತೆರಳಿ ಕೃಷಿ ಚುಟುವಟಿಕೆಯಲ್ಲಿ ನಿರತನಾಗಿದ್ದ. ಇದನ್ನೂ ಓದಿ: ಮತದಾನ ಮಾಡಿದ ಸದಸ್ಯರಿಂದ ಮತ ಪತ್ರ ಬಹಿರಂಗ- ಚುನಾವಣಾಧಿಕಾರಿಗೆ ದೂರು
Advertisement
Advertisement
ಅನುಮಾನಗೊಂಡ ನೆರೆಹೊರೆಯವರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಇದರಿಂದಾಗಿ ಪ್ರಕರಣ ಬೆಳಕಿಗೆ ಬಂದಿದೆ. ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ಸಂಬAಧ ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.