ಬೆಳಗಾವಿ: ಮದುವೆ (Marriage) ಖುಷಿಯಲ್ಲಿದ್ದ ಯುವಕನನ್ನು ಕ್ಷುಲ್ಲಕ ಕಾರಣಕ್ಕೆ ಆತನ ತಂದೆ ಹಾಗೂ ಸಹೋದರ ಸೇರಿ ಹತ್ಯೆಗೈದ ಘಟನೆ ಕಿತ್ತೂರು (Kitturu) ತಾಲೂಕಿನ ಚಿಕ್ಕ ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಮಂಜುನಾಥ್ ಉಳ್ಳಾಗಡ್ಡಿ (25) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಗಳನ್ನು, ನಾಗಪ್ಪ ಹಾಗೂ ಗುರುಬಸಪ್ಪ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಮಂಜುನಾಥ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತ ತಂದೆ ಹಾಗೂ ಸಹೋದರ ಆತನನ್ನು ಕಲ್ಲು, ಇಟ್ಟಿಗೆಯಿಂದ ಹೊಡೆದು ಹತ್ಯೆಗೈದಿದ್ದಾರೆ. ಇದನ್ನೂ ಓದಿ: 11 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆ ಅರೆಸ್ಟ್
ಮಾ.12ರಂದು ಮಂಜುನಾಥ್ ಮದುವೆ ನಿಗದಿಯಾಗಿತ್ತು. ಆತನ ಮದುವೆಗಾಗಿ ಸೇನೆಯಲ್ಲಿದ್ದ ಗುರುಬಸಪ್ಪ ರಜೆಯ ಮೇಲೆ ಊರಿಗೆ ಬಂದಿದ್ದ ಎಂದು ತಿಳಿದು ಬಂದಿದೆ.
ಕಿತ್ತೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶವವನ್ನು ಬಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇದನ್ನೂ ಓದಿ: 3 ವಾರಗಳ ಹಿಂದೆ ಅಪ್ರಾಪ್ತ ಬಾಲಕಿ ನಾಪತ್ತೆ – 42 ವರ್ಷದ ವ್ಯಕ್ತಿಯ ಜೊತೆ ಶವವಾಗಿ ಪತ್ತೆ