ಹಾಸನ: ಪ್ರತಿನಿತ್ಯ ಕುಡಿದು ಬಂದು ಮದುವೆ ಮಾಡಿಸುವಂತೆ ಗಲಾಟೆ ಮಾಡಿ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಹತ್ಯೆಗೈದ ಪ್ರಕರಣ ಹೊಳೆನರಸೀಪುರದ (Holenarasipur) ಮಾವನೂರಿನಲ್ಲಿ ನಡೆದಿದೆ.
ಹತ್ಯೆಗೀಡಾದ ವ್ಯಕ್ತಿಯನ್ನು ಉಮೇಶ್ (35) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ನಂಜುಂಡೇಗೌಡ ಎಂದು ಗುರುತಿಸಲಾಗಿದೆ. ಉಮೇಶ್ ಪ್ರತಿನಿತ್ಯ ಕುಡಿದು ಬಂದು ಆಸ್ತಿ ನೀಡುವಂತೆ ಹಾಗೂ ಮದುವೆ ಮಾಡುವಂತೆ ತಂದೆಯೊಂದಿಗೆ ಜಗಳವಾಡುತ್ತಿದ್ದ. ಇದೇ ಕಾರಣಕ್ಕೆ ಆರೋಪಿ ಬ್ಯಾಟರಿಯಿಂದ ಉಮೇಶ್ ತಲೆಗೆ ಬಲವಾಗಿ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಈಗ ಕರ್ನಾಟಕಕ್ಕೂ ಚಂದ್ರನಿಗೂ ನೇರ ಸಂಪರ್ಕ
ಉಮೇಶ್ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಇದರಿಂದ ಆತ ಕೊಟ್ಟಿಗೆಯಲ್ಲಿ ಬಿದ್ದಿದ್ದಾನೆ. ಬಳಿಕ ಆತನ ಸ್ನೇಹಿತರು ಆಸ್ಪತ್ರೆಗೆ ಸಾಗಿಸಲು ಪ್ರತಯತ್ನಿಸಿದ್ದಾರೆ. ಆದರೆ ಆತ ಮಾರ್ಗ ಮಧ್ಯೆಯೇ ಸಾವಿಗೀಡಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆ.26ಕ್ಕೆ ಬೆಂಗಳೂರಿಗೆ ಮೋದಿ – ಇಸ್ರೋ ಕೇಂದ್ರ ಕಚೇರಿಗೆ ಭೇಟಿ
Web Stories