Connect with us

Crime

ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ

Published

on

ಶಿವಮೊಗ್ಗ: ತಂದೆಯೇ ತನ್ನ 13 ವರ್ಷದ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಸಿರಿಯೂರು ತಾಂಡದಲ್ಲಿ ನಡೆದಿದೆ.

ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ತಂದೆಯನ್ನು ಉಮೇಶ ನಾಯ್ಕ ಎಂದು ಗುರುತಿಸಲಾಗಿದೆ. ಬಾಲಕಿ ತಾಯಿ ಗಾರ್ಮೆಂಟ್ಸ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಕೆಲಸಕ್ಕೆ ತೆರಳಿದ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ತನ್ನ ಮಗಳ ಮೇಲೆಯೇ ಪಾಪಿ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ತಂದೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದರಿಂದ ಗಾಬರಿಗೊಂಡ ಬಾಲಕಿ ಕಿರುಚಿಕೊಂಡಿದ್ದಾಳೆ. ಬಾಲಕಿ ಕಿರುಕಿಕೊಂಡಿದ್ದನ್ನು ಕೇಳಿಸಿಕೊಂಡ ಆಕೆಯ ದೊಡ್ಡಮ್ಮ ಗಮನಿಸಿ ಆರೋಪಿ ತಂದೆಯಿಂದ ಬಾಲಕಿಯನ್ನು ರಕ್ಷಿಸಿದ್ದಾರೆ.

ಈ ಬಗ್ಗೆ ಭದ್ರಾವತಿ ಗ್ರಾಮಂತರ ಠಾಣಾ ಪೊಲೀಸರು ಆರೋಪಿ ಉಮೇಶ ನಾಯ್ಕ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿ ಉಮೇಶ ನಾಯ್ಕನನ್ನು ಬಂಧಿಸಿದ್ದಾರೆ.

Click to comment

Leave a Reply

Your email address will not be published. Required fields are marked *