ನವದೆಹಲಿ: ಲೋಕಸಭೆಯಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತ ಖಾಸಗಿ ಮಸೂದೆಯನ್ನು ಮಂಡಿಸಲಿದ್ದೇನೆ ಎಂದು ನಟ ಹಾಗೂ ಬಿಜೆಪಿ ಸಂಸದ ರವಿ ಕಿಶನ್ ಶುಕ್ರವಾರ ಹೇಳಿದ್ದಾರೆ.
ಉತ್ತರ ಪ್ರದೇಶದ ಗೋರಖ್‌ಪುರ ಕ್ಷೇತ್ರದ ಸಂಸದರಾಗಿರುವ ಕಿಶನ್ ಅವರಿಗೆ ಸ್ವತಃ ನಾಲ್ವರು ಮಕ್ಕಳಿದ್ದಾರೆ. ಮೂವರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ. ಇದನ್ನೂ ಓದಿ: ಬಿಎಸ್‌ವೈಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್
Advertisement
Advertisement
ಜನಸಂಖ್ಯೆ ನಿಯಂತ್ರಣ ಮಸೂದೆಯನ್ನು ತಂದಾಗ ಮಾತ್ರ ನಾವು ವಿಶ್ವಗುರುವಾಗಲು ಸಾಧ್ಯ. ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರುವುದು ಬಹಳ ಮುಖ್ಯ ಎಂದು ಕಿಶನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Advertisement
ನಾನು ಮಸೂದೆಯನ್ನು ಪರಿಚಯಿಸಲು ವಿಪಕ್ಷಗಳು ಅವಕಾಶ ಕಲ್ಪಿಸಬೇಕು. ಯಾಥಕ್ಕಾಗಿ ಈ ಮಸೂದೆ ಮಂಡಿಸುತ್ತಿದ್ದೇನೆ ಎಂಬುದನ್ನು ಸಹ ಆಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸದನದ ಕಲಾಪಕ್ಕೆ ಅಡ್ಡಿಪಡಿಸೋ ಮೂಲಕ ಕಾಂಗ್ರೆಸ್ ಸಂಸದರ ಹಕ್ಕು ಕಸಿಯುತ್ತಿದೆ: ಜೋಶಿ ಟೀಕೆ
Advertisement
ಜನಸಂಖ್ಯೆ ನಿಯಂತ್ರಣಕ್ಕೆ ಯಾವುದೇ ಶಾಸನಾತ್ಮಕ ಕ್ರಮವನ್ನು ಕೇಂದ್ರವು ಪರಿಗಣಿಸುತ್ತಿಲ್ಲ ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದರು. ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾರತದಲ್ಲಿ ಹೆಚ್ಚುತ್ತಿರುವ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಪರಿಚಯಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
2023ರ ವೇಳೆಗೆ ಭಾರತದ ಜನಸಂಖ್ಯೆಯು ಚೀನಾವನ್ನು ಮೀರಿಸುತ್ತದೆ ಎಂದು ವಿಶ್ವಸಂಸ್ಥೆ ಭವಿಷ್ಯ ನುಡಿದಿದೆ.