ಜೈಪುರ: ರಾತ್ರಿ ವೇಳೆ ಶೌಚಕ್ಕೆ ತೆರಳಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಾಲ್ಕುಮಕ್ಕಳ ತಂದೆಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಇಲ್ಲಿನ ರಾಜಾಸ್ಥಾನದ ಭರತ್‌ಪುರದಲ್ಲಿ ನಡೆದಿದೆ.
ರಾತ್ರಿ ವೇಳೆ ಆಕೆ ಮನೆಯಿಂದ ಆಚೆ ಬಂದಂತಹ ಸಂದರ್ಭದಲ್ಲಿ ನೆರೆಯವನೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಸಂತ್ರಸ್ತ ಬಾಲಕಿ ತನ್ನ ಪೋಷಕರೊಂದಿಗೆ ಠಾಣೆಗೆ ತೆರಳಿ ದೂರು ದಾಖಲಿಸುವ ವೇಳೆ ಪೊಲೀಸರು ನಿರಾಕರಿಸಿದ್ದಾರೆ. ಇದರಿಂದ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ವರ ಧೋತಿ-ಕುರ್ತಾ ಬದಲು ಶೇರ್ವಾನಿ ಧರಿಸಿದ್ದಕ್ಕೆ ಮದುವೆ ಮನೆಯಾಯ್ತು ರಣರಂಗ
Advertisement
Advertisement
ನಂತರ ಸಂತ್ರಸ್ತೆಯ ತಂದೆ ಪೊಲೀಸ್ ಠಾಣೆಯಲ್ಲಿ ನೆರೆಯವರ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ರಾತ್ರಿ ವೇಳೆ ನನ್ನ ಅಪ್ರಾಪ್ತ ಮಗಳು ಮಲವಿಸರ್ಜನೆಗೆಂದು ಹೊರ ಹೋಗಿದ್ದಳು, ಈ ವೇಳೆ ನೆರೆಯವರು ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಂಗವಿಕಲ ಮಗುವಿಗೆ ಬೋರ್ಡಿಂಗ್ ನಿರಾಕರಿಸಿದ ವಿಮಾನ ನಿಲ್ದಾಣ ಸಿಬ್ಬಂದಿ – ವೀಡಿಯೋ ವೈರಲ್
Advertisement
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಪಿಗಾಗಿ ಶೋಧ ಆರಂಭಿಸಲಾಗಿದೆ ಎಂದು ತನಿಖಾಧಿಕಾರಿ ಅಜಯ್ ಶರ್ಮಾ ಹೇಳಿದ್ದಾರೆ.