ರಾಯ್ಪುರ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದಲ್ಲಿ (Mahadev Betting App Scam) ಆರೋಪಿಯಾಗಿರುವ ವ್ಯಕ್ತಿಯ ತಂದೆ ಮಂಗಳವಾರ ಛತ್ತೀಸ್‍ಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರನ್ನು ಸುಶೀಲ್ ದಾಸ್ (62) ಎಂದು ಗುರುತಿಸಲಾಗಿದೆ. ಮೃತರು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಪ್ರಕರಣದಲ್ಲಿ ನಗದು ಕೊರಿಯರ್ ಆಗಿದ್ದ ಆಸಿಮ್ ದಾಸ್ ತಂದೆ. ಇದನ್ನೂ ಓದಿ: ತುಮಕೂರಲ್ಲಿಂದು ವಿ. ಸೋಮಣ್ಣ ಶಕ್ತಿಪ್ರದರ್ಶನ- ಕಾಂಗ್ರೆಸ್ ಸೇರುತ್ತಾರಾ ಮಾಜಿ ಸಚಿವ?
ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಸುಶೀಲ್ ದಾಸ್ ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದರು. ಇದೀಗ ಅವರ ಶವ ಅಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ಅಚ್ಚೋಟಿ ಗ್ರಾಮದ ಬಾವಿಯಲ್ಲಿ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದು ಆತ್ಮಹತ್ಯೆ ಎಂದು ತೋರುತ್ತದೆ. ಆದರೆ ಸಾವಿನ ಹಿಂದಿನ ನಿಖರ ಕಾರಣ ಏನೆಂದು ತನಿಖೆಯ ಬಳಿಕವಷ್ಟೇ ಗೊತ್ತಾಗಬೇಕೆಂದು ದುರ್ಗದ ಹಿರಿಯ ಪೊಲೀಸ್ ಅಧೀಕ್ಷಕ ರಾಮ್ ಗೋಪಾಲ್ ಗಾರ್ಗ್ ತಿಳಿಸಿದ್ದಾರೆ.
ದಾಸ್, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಜಪೂತ್ ಕರ್ಣಿ ಸೇನಾ ಮುಖ್ಯಸ್ಥನ ಹಣೆಗೆ ಗುಂಡಿಟ್ಟು ಹತ್ಯೆ – ರೊಚ್ಚಿಗೆದ್ದ ಬೆಂಬಲಿಗರಿಂದ ರಾಜಸ್ಥಾನ ಬಂದ್‌ಗೆ ಕರೆ
ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಅಸೀಮ್ ದಾಸ್ ಮತ್ತು ಮತ್ತೊಬ್ಬ ಆರೋಪಿ, ಕಾನ್‍ಸ್ಟೆಬಲ್ ಭೀಮ್ ಸಿಂಗ್ ಯಾದವ್ ಅವರನ್ನು ನವೆಂಬರ್ 3 ರಂದು ಇಡಿ ಬಂಧಿಸಿತ್ತು.