ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ತಂದೆ!

Public TV
1 Min Read
KOLAR BABY SALE

ಕೋಲಾರ: ಸಾಲ ತೀರಿಸುವ ಸಲುವಾಗಿ ತಂದೆಯೊಬ್ಬ ತನ್ನ ಗಂಡು ಮಗುವನ್ನೇ ಮಾರಿದ ಅಮಾನವೀಯ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ.

ಬಂಗಾರಪೇಟೆ ನಗರ ನಿವಾಸಿಗಳಾದ ಮುನಿರಾಜು ಹಾಗೂ ಪವಿತ್ರ ದಂಪತಿಯ ಮೂರು ತಿಂಗಳ ಮಗು ಇದಾಗಿದೆ. ಬಂಗಾರಪೇಟೆಯ ಕೆರೆಕೋಡಿ ನಿವಾಸಿಯಾದ ವಲ್ಲಿ ಎನ್ನುವ ಮಹಿಳೆ ಮೂಲಕ ಮುನಿರಾಜು, ಮಗು ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ.

ಹಣದಾಸೆಗೆ ಬಿದ್ದ ಪತಿ ಮುನಿರಾಜು 3 ತಿಂಗಳ ಗಂಡು ಮಗು ಮಾರಾಟ ಮಾಡಿದ್ದಾನೆ. ತನಗೆ ಮಗು ಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಆಯೋಗ ಹಾಗೂ ಬಂಗಾರಪೇಟೆ ಪೊಲೀಸ್ ಠಾಣೆಗೆ ಪತ್ನಿ ಪವಿತ್ರ ದೂರು ನೀಡಿದ್ದಾರೆ. ಮಗು ಅಪಹರಣ ಮಾಡಿದ್ದಾರೆಂದು ಪತಿ ಮುನಿರಾಜು ಹಾಗೂ ವಲ್ಲಿ ವಿರುದ್ದ ದೂರು ನೀಡಿರುವ ಪವಿತ್ರಾ, ಮಗುವನ್ನ ವಾಪಾಸ್ ಕೊಡಿಸುವಂತೆ  ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

Share This Article