ಚಿಕ್ಕೋಡಿ: ನದಿಯಲ್ಲಿ ಮೀನು ಹಿಡಿಯಲು ಹೋದ ತಂದೆ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಬೆನಕನಹೊಳಿ ಗ್ರಾಮದ ಘಟಪ್ರಭಾ ನದಿಯಲ್ಲಿ (Ghataprabha River) ನಡೆದಿದೆ.
ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದಾರೆ. ತಂದೆ ಲಕ್ಷ್ಮಣ ರಾಮಾ ಅಂಬಲಿ(46), ಮಕ್ಕಳಾದ ರಮೇಶ(15), ಯಲ್ಲಪ್ಪ(13) ಘಟಪ್ರಭಾ ನದಿಯಲ್ಲಿ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಪತ್ರ
- Advertisement -
- Advertisement -
ಬೆನಕನಹೊಳಿ ಗ್ರಾಮದ ಲಕ್ಷ್ಮಣ ಮೀನುಗಾರಿಕೆ (Fishing) ಕಸುಬು ಮಾಡುತ್ತಿದ್ದರು. ಭಾನುವಾರ ಸಂಜೆ ಇಬ್ಬರು ಮಕ್ಕಳೊಂದಿಗೆ ಮೀನು ಹಿಡಿಯಲು ಹೋಗಿದ್ದ ಲಕ್ಷ್ಮಣ ಮನೆಗೆ ಬಾರದ ಕಾರಣ ಕುಟುಂಬಸ್ಥರು ಪೊಲೀಸರನ್ನು ಸಂಪರ್ಕ ಮಾಡಿದ್ದಾರೆ.
- Advertisement -
ತಕ್ಷಣ ವಿಷಯ ತಿಳಿದ ಯಮಕನಮರಡಿ ಪಿಐ ಜಾವೇದ ಮುಷಾಪುರೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ತಿಳಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಮೂವರಿಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಬೋಟ್ ಮೂಲಕ ಶೋಧ ಕಾರ್ಯ ನಡೆಯುತ್ತಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -