– ಬ್ಲ್ಯಾಕ್ ಮೇಲ್ ಮಾಡಿ ಮಗ್ಳ ಮೇಲೆಯೇ ರೇಪ್
ಮುಂಬೈ: ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗಳು ಗೆಳೆಯನೊಂದಿಗೆ ಸೆಕ್ಸ್ ಮಾಡಿದ್ದ ವಿಡಿಯೋವನ್ನು ಇಟ್ಟುಕೊಂಡು, ಬ್ಲ್ಯಾಕ್ ಮೇಲ್ ಮಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಗರದಲ್ಲಿ ನಡೆದಿದೆ.
40 ವರ್ಷದ ವ್ಯಕ್ತಿ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ನಗರ ಪೊಲೀಸರು ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಸಂತ್ರಸ್ತೆಯ 17 ವರ್ಷದ ಗೆಳೆಯನ ಮೇಲೂ ಅತ್ಯಾಚಾರ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆರೋಪಿ ತಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ನ್ಯಾಯಾಲಯವು ಆತನ ಅರ್ಜಿಯನ್ನು ತಿರಸ್ಕರಿಸಿದೆ. ನಂತರ ಆರೋಪಿ ತಂದೆ ಪರಾರಿಯಾಗಿದ್ದಾನೆ. ಸಂತ್ರಸ್ತೆಯ ಗೆಳೆಯನ ನಿರೀಕ್ಷಿತ ಜಾಮೀನು ಅರ್ಜಿಯ ಮನವಿಯನ್ನು ನ್ಯಾಯಾಲಯವು ಅನುಮತಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
Advertisement
Advertisement
ಕಳೆದ ನವೆಂಬರ್ ನಲ್ಲಿ ಸಂತ್ರಸ್ತೆಯ ತಾಯಿ ತನ್ನ ಫೋನಿನಲ್ಲಿ ನಗ್ನ ವಿಡಿಯೊಗಳನ್ನು ನೋಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಆರೋಪಿ ತಂದೆ ಮಗಳ ಫೋನ್ನಲ್ಲಿ ಸೆಕ್ಸ್ ವಿಡಿಯೊಗಳನ್ನು ತನ್ನ ಫೋನಿಗೆ ಕಳುಹಿಸಿಕೊಂಡಿದ್ದನ್ನು ಪತ್ನಿ ನೋಡಿದ್ದಾರೆ. ಆದರೆ ಆರೋಪಿ ಆ ವಿಡಿಯೋವನ್ನು ಡಿಲೀಟ್ ಮಾಡಿರಲಿಲ್ಲ. ನಂತರ ಸಂತ್ರಸ್ತೆ ನಡೆದ ಘಟನೆಯ ಬಗ್ಗೆ ತಾಯಿಗೆ ತಿಳಿಸಿದ್ದಾಳೆ. ಕೊನೆಗೆ ಸಂತ್ರಸ್ತೆ ತಾಯಿ ಪೊಲೀಸ್ ಠಾಣೆಗೆ ಹೋಗಿ ಈ ಕುರಿತು ದೂರು ದಾಖಲಿಸಿದ್ದಾರೆ.
Advertisement
ಸಂತ್ರಸ್ತೆ ನಡೆದ ಘಟನೆಯ ಬಗ್ಗೆ ಸಂಪೂರ್ಣವಾಗಿ ಪೊಲೀಸರಿಗೆ ತಿಳಿಸಿದ್ದಾಳೆ. ನನ್ನ ಕಾಲೇಜು ಗೆಳೆಯ ಪೋಷಕರು ಮನೆಯಲ್ಲಿದ್ದಾಗಲೇ ಕಾಲೇಜಿನಲ್ಲಿ ಕೊಟ್ಟಿದ್ದ ಪ್ರಾಜೆಕ್ಟ್ ವಿಚಾರವಾಗಿ ಸಹಾಯ ಪಡೆಯಲು ಬಂದಿದ್ದನು. ಈ ವೇಳೆ ನನ್ನ ಆರೋಗ್ಯ ಸರಿಯಿರಲಿಲ್ಲ. ಹೀಗಾಗಿ ನಾನು ರೂಮಿಗೆ ಹೋಗಿ ವಿಶ್ರಾಂತಿ ಪಡೆಯುತ್ತಿದ್ದೆ. ಆಗ ನನ್ನ ಗೆಳೆಯ ರೂಮಿಗೆ ಬಂದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿದ್ದಾಳೆ.
Advertisement
ಈ ಘಟನೆಯ ಬಗ್ಗೆ ತಾನು ಯಾರಿಗೂ ಹೇಳಿರಲಿಲ್ಲ. ಆದರೆ ತಾಯಿ ಮನೆಯಲ್ಲಿ ಇಲ್ಲದಿದ್ದಾಗ ತಂದೆ ಗೆಳೆಯನೊಂದಿಗಿದ್ದ ವಿಡಿಯೋವನ್ನು ತೋರಿಸಿದರು. ನಂತರ ಪದೇ ಪದೇ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾರೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲೆ ಮಾಡುತ್ತಿದ್ದರು. ಅಷ್ಟೆ ಅಲ್ಲದೇ ಇದರಿಂದ ನಿನ್ನ ತಾಯಿಗೆ ಡಿವೋರ್ಸ್ ಕೊಡುತ್ತೇನೆ ಎಂದು ಬೆದರಿಸುತ್ತಿದ್ದರು ಎಂದು ಸಂತ್ರಸ್ತೆ ಪೊಲೀಸರ ಬಳಿ ಹೇಳಿಕೊಂಡಿದ್ದಾಳೆ.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ತಂದೆಗಾಗಿ ಬಲೆ ಬೀಸಿದ್ದಾರೆ.