– ನನ್ನನ್ನು ದ್ವೇಷಿಸುವವರು ಪಾಕಿಸ್ತಾನಕ್ಕೆ ಹೋಗಲಿ ಅಂದ್ರು ಉಮರ್ ಅಹ್ಮದ್
ಅಯೋಧ್ಯೆ: ಜನವರಿ 22 ರಂದು ನಡೆದ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಿದ್ದ ಆಲ್ ಇಂಡಿಯಾ ಇಮಾಮ್ ಸಂಘಟನೆಯ ಮುಖ್ಯ ಇಮಾಮ್ ವಿರುದ್ಧ ಫತ್ವಾ (Fatwa) ಹೊರಡಿಸಲಾಗಿದೆ.
Advertisement
ಡಾ. ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ (Dr Imam Umer Ahmed Ilyasi) ಅವರಿಗೆ ಫತ್ವಾ ಹೊರಡಿಸಲಾಗಿದೆ. ಈ ವಿಚಾರವನ್ನು ಸ್ವತಃ ಉಮರ್ ಅಹ್ಮದ್ ಅವರೇ ತಿಳಿಸಿದ್ದಾರೆ. ಮುಖ್ಯ ಇಮಾಮ್ ಆಗಿ ನಾನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಆಹ್ವಾನವನ್ನು ಸ್ವೀಕರಿಸಿದ್ದೇನೆ. ನಾನು ಎರಡು ದಿನ ಆಲೋಚಿಸಿ ನಂತರ ದೇಶಕ್ಕಾಗಿ ಸೌಹಾರ್ದತೆಗಾಗಿ ಅಯೋಧ್ಯೆಗೆ (Ayodhya Ram Mandir) ಹೋಗಲು ನಿರ್ಧರಿಸಿದೆ ಎಂದು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ಶೆಟ್ಟರ್ ಡೀಸೆಂಟ್ ಜಂಟಲ್ ಮ್ಯಾನ್, ಕಾಂಗ್ರೆಸ್ಸಿಗರು ಉಳಿಸಿಕೊಳ್ಳಬೇಕಾಗಿತ್ತು: ಹರಿಪ್ರಸಾದ್
Advertisement
Advertisement
ಕ್ಷಮೆ ಕೇಳಲ್ಲ: ಭಾನುವಾರ ಫತ್ವಾ ಹೊರಡಿಸಲಾಗಿದೆ. ಜನವರಿ 22 ರ ಸಂಜೆಯಿಂದ ನನಗೆ ಸಾಕಷ್ಟು ಬೆದರಿಕೆ ಕರೆಗಳು ಬರುತ್ತಿವೆ. ನಾನು ಕೆಲವು ಕರೆಗಳನ್ನು ರೆಕಾರ್ಡ್ ಮಾಡಿದ್ದೇನೆ, ಅದರಲ್ಲಿ ಕರೆ ಮಾಡಿದವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ನನ್ನನ್ನು ಪ್ರೀತಿಸುವವರು ಹಾಗೂ ರಾಷ್ಟ್ರವನ್ನು ಪ್ರೀತಿಸುವವರು ನನ್ನನ್ನು ಬೆಂಬಲಿಸುತ್ತಾರೆ. ಪ್ರಾಣಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನನ್ನು ದ್ವೇಷಿಸುವವರು ಬಹುಶಃ ಪಾಕಿಸ್ತಾನಕ್ಕೆ ಹೋಗಲಿ. ನಾನು ಪ್ರೀತಿಯ ಸಂದೇಶವನ್ನು ನೀಡಿದ್ದೇನೆ, ನಾನು ಯಾವುದೇ ಅಪರಾಧ ಮಾಡಿಲ್ಲ. ಈ ಸಂಬಂಧ ನಾನು ಕ್ಷಮೆಯಾಚಿಸುವುದಿಲ್ಲ ಅಥವಾ ರಾಜೀನಾಮೆ ನೀಡುವುದಿಲ್ಲ. ಅವರು ಏನು ಬೇಕಾದರೂ ಮಾಡಬಹುದು ಎಂದು ಅವರು ಹೇಳಿದ್ದಾರೆ.
Advertisement
#WATCH | Delhi | Fatwa issued against Chief Imam of All India Imam Organization, Dr Imam Umer Ahmed Ilyasi after he attended the Pranpratishtha ceremony of Ram Lalla at Ram Temple in Ayodhya.
He says, "As a chief Imam, I received the invitation from Shri Ram Janmbhoomi Teerth… pic.twitter.com/iVe2bA3s1X
— ANI (@ANI) January 29, 2024
ಈ ಕುರಿತು ಮುಖ್ಯ ಇಮಾಮ್ ಅವರು ಕೇಂದ್ರ ಗೃಹ ಸಚಿವಾಲಯ ಮತ್ತು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ ಅವರ ವಿರುದ್ಧದ ಫತ್ವಾ ದುರದೃಷ್ಟಕರ ಮತ್ತು ಖಂಡನೀಯ ಕೃತ್ಯ ಎಂದು ವಿಎಚ್‌ಪಿ ಬಣ್ಣಿಸಿದೆ. ಕೆಲವು ಮೂಲಭೂತವಾದಿಗಳು ಇಸ್ಲಾಂ ಅನ್ನು ತಮ್ಮ ಆಸ್ತಿ ಎಂದು ಪರಿಗಣಿಸುತ್ತಾರೆ ಎಂದು ಕಿಡಿಕಾರಿದೆ.