ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಗೆ 26 ಮಂದಿ ಹಿಂದೂಗಳು ಬಲಿಯಾಗಿದ್ದಾರೆ. ಈ ಹಿನ್ನೆಲೆ ಪಾಕ್ ಕಲಾವಿದರನ್ನು ಭಾರತದ ಸಿನಿಮಾದಿಂದ ಹೊರಗಿಡುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಪ್ರಭಾಸ್ ನಟನೆಯ ‘ಫೌಜಿ’ (Fauji) ಚಿತ್ರದ ನಾಯಕಿ ಇಮಾನ್ವಿ (Imanvi) ಪಾಕಿಸ್ತಾನಿ, ಅವರನ್ನು ಚಿತ್ರದಿಂದ ತೆಗೆದು ಹಾಕುವಂತೆ ನೆಟ್ಟಿಗರು ಪಟ್ಟು ಹಿಡಿದಿದ್ದಾರೆ. ಹಾಗಾಗಿ ನಟಿ ಪ್ರತಿಕ್ರಿಯಿಸಿ, ನನಗೂ ಹಾಗೂ ನನ್ನ ಕುಟುಂಬಕ್ಕೂ ಪಾಕಿಸ್ತಾನದ ಜೊತೆ ನಂಟಿಲ್ಲ ಎಂದು ಟ್ರೋಲಿಗರಿಗೆ ಪೋಸ್ಟ್ ಮೂಲಕ ಕ್ಲ್ಯಾರಿಟಿ ನೀಡಿದ್ದಾರೆ. ಇದನ್ನೂ ಓದಿ:ನಾನೊಬ್ಬ ಮುಸ್ಲಿಂ ಆಗಿದ್ದಕ್ಕೆ ನಾಚಿಕೆ ಆಗ್ತಿದೆ: ಉಗ್ರರ ದಾಳಿಗೆ ಸಲೀಂ ಮರ್ಚೆಂಟ್ ಕಿಡಿ
ಇಮಾನ್ವಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ಪಹಲ್ಗಾಮ್‌ನಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಲು ಬಯಸುತ್ತೇನೆ. ಕಲಾವಿದೆಯಾಗಿ ನನಗೆ ಪ್ರೀತಿ ಹಂಚುವುದು ಗೊತ್ತೇ ಹೊರತು, ದ್ವೇಷವಲ್ಲ. ಕಳೆದ ಎರಡ್ಮೂರು ದಿನಗಳಿಂದ ನನ್ನ ಬಗ್ಗೆ ಕೇಳಿ ಬರುತ್ತಿರುವ ಆರೋಪಗಳೆಲ್ಲಾ ಶುದ್ಧ ಸುಳ್ಳು. ನಾನು ಪಾಕಿಸ್ತಾನಿಯಲ್ಲ, ನನಗೆ ಅಥವಾ ನನ್ನ ಕುಟುಂಬಕ್ಕೆ ಪಾಕ್ ಸೇನೆಯೊಂದಿಗೆ ನಂಟಿಲ್ಲ ಎಂದಿದ್ದಾರೆ. ದ್ವೇಷವನ್ನು ಹರಡುವ ಏಕೈಕ ಉದ್ದೇಶಕ್ಕಾಗಿ ಆನ್‌ಲೈನ್‌ನಲ್ಲಿ ಕೆಲವರು ಸುಳ್ಳು ಸುದ್ದಿ ಸೃಷ್ಟಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ‘ಮ್ಯಾಕ್ಸ್’ ಖ್ಯಾತಿಯ ಶ್ರೀಧರ್‌ಗೆ ಅನಾರೋಗ್ಯ- ಚಿಕಿತ್ಸೆಗೆ ಸಹಾಯ ಕೋರಿದ ನಟ
ನಾನು ಹಿಂದಿ, ತೆಲುಗು, ಗುಜರಾತಿ ಮತ್ತು ಇಂಗ್ಲಿಷ್ ಮಾತನಾಡುವ ಹೆಮ್ಮೆಯ ಭಾರತೀಯ ಅಮೆರಿಕನ್. ನನ್ನ ಹೆತ್ತವರು ಅಮೆರಿಕಕ್ಕೆ ಕಾನೂನುಬದ್ಧವಾಗಿ ವಲಸೆ ಹೋಗಿದ್ದರು. ನಾನು ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಹುಟ್ಟಿದೆ. ಇದೀಗ ಭಾರತೀಯ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುವ ಅವಕಾಶ ಪಡೆದಿರೋದರ ಬಗ್ಗೆ ಖುಷಿಯಿದೆ. ಇಲ್ಲಿನ ಸಂಸ್ಕೃತಿ, ಸಂಪ್ರದಾಯದ ಬಗ್ಗೆ ಗೌರವವಿದೆ ಹಾಗೂ ನಂಟಿದೆ. ಸಾಮಾಜಿಕ ಜಾಲತಾಣವು ಎಲ್ಲರನ್ನು ಜೊತೆಗೂಡಿಸುವ ಮಾಧ್ಯಮವಾಗಬೇಕೇ ಹೊರತು ಸಂಬಂಧಗಳನ್ನು ಒಡೆಯಬಾರದು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಎಲ್ಲರೂ ತಪ್ಪಾದ ಮಾಹಿತಿ ತಿಳಿದುಕೊಂಡಿದ್ದಾರೆ. ನಾನು ಪಾಕಿಸ್ತಾನದವಳಲ್ಲ ಎಂಬುದನ್ನು ಇಮಾನ್ವಿ ಸ್ಪಷ್ಟಪಡಿಸಿದ್ದಾರೆ.
View this post on Instagram
ಅಂದಹಾಗೆ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುತ್ತಾ ಡಿಜಿಟಲ್ ಕ್ರಿಯೆಟರ್ ಆಗಿ ಇಮಾನ್ವಿ ಗುರುತಿಸಿಕೊಂಡಿದ್ದಾರೆ. ಪ್ರಭಾಸ್ ಸಿನಿಮಾಗೆ ನಟಿಯನ್ನು ಆಯ್ಕೆ ಮಾಡಿದ್ಮೇಲೆ ಅವರ ಮೇಲಿನ ಕ್ರೇಜ್ ಫ್ಯಾನ್ಸ್‌ಗೆ ಹೆಚ್ಚಾಗಿದೆ.