ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕೆಲ ದಿನಗಳಿಂದ ಕೊಂಚ ಮಟ್ಟಿಗೆ ಬಿಡುವು ನೀಡಿದ ಮಳೆ ಕಳೆದ ಒಂದುವಾರದಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿದೆ. ಇದರಿಂದ ಜಿಲ್ಲೆಯ ಜನರು ಮತ್ತೆ ಹೈರಾಣಾಗುತ್ತಿದ್ದಾರೆ. ಈ ನಡುವೆ 2018 ರಲ್ಲಿ ಪ್ರಕೃತಿ ವಿಕೋಪ ಉಂಟಾಗಿದ್ದ ಗ್ರಾಮಗಳಲ್ಲಿ ಮತ್ತೆ ಭೂಕುಸಿತ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿದ್ದು ಗ್ರಾಮೀಣ ಭಾಗದ ಜನರು ಮತ್ತೆ ಆತಂಕಕ್ಕೆ ಒಳಗಾಗುತ್ತಿದ್ದಾರೆ.
ಬೆಟ್ಟ ಗುಡ್ಡದ ನಿವಾಸಿಗಳಿಗೆ ಭೂಕುಸಿತದ ಭೀತಿ
ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆ ಆರ್ಭಟ ಹೆಚ್ಚಾಗುತ್ತಿದೆ. ಜಿಲ್ಲೆಯ ಜನರು ಅಕ್ಷರಶಃ ತತ್ತರಿಸಿ ಹೋಗುತ್ತಿದ್ದಾರೆ. ಈ ನಡುವೆ ಹಳ್ಳ-ಕೊಳ್ಳ ನದಿ ತೊರೆಗಳಲ್ಲಿ ನಿಧಾನವಾಗಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹೀಗಾಗಿ ಬೆಟ್ಟಗುಡ್ಡದ ನಿವಾಸಿಗಳಿಗೆ ಭೂಕುಸಿತದ (Landslides) ಭೀತಿ ಮತ್ತೆ ಕಾಡುತ್ತಿದೆ. ಇದನ್ನೂ ಓದಿ: ಕೊಡಗಿನಲ್ಲಿ ನಿರಂತರ ಮಳೆ – ಭೂಕುಸಿತ ಆತಂಕದ ನಡುವೆಯೇ ಜನರ ಜೀವನ
ಹೌದು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕಿರುದಾಲೆ ಗ್ರಾಮದಲ್ಲಿ 2018-19ರಲ್ಲಿ ಭೀಕರ ಪ್ರವಾಹ, ಭೂಕುಸಿತ ಸಂಭವಿಸಿತ್ತು. ಅಂದು ಇಲ್ಲಿನ ಜನ ಮನೆ ಮಠಗಳನ್ನ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ತೆರಳಿ ಜೀವ ಉಳಿಸಿಕೊಂಡಿದ್ರು. ಪ್ರತಿ ಮಳೆಗಾಲದ ಸಂದರ್ಭದಲ್ಲಿಯೂ ಇಲ್ಲಿನ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ನಿರಂತರ ಮಳೆಯಾಗುತ್ತಿರುವುದರಿಂದ ಈ ಆತಂಕ ಇನ್ನೂ ಹೆಚ್ಚಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ನಿರಂತರ ಗಾಳಿ ಮಳೆಯಿಂದ ಹರಡುತ್ತಿದೆ ವೈರಲ್ ಫೀವರ್ – ಒಂದೇ ತಿಂಗಳಲ್ಲಿ 3,000 ಕೇಸ್
ಈ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳ ಕೆಲ ಜಾಗಗಳಲ್ಲಿ ಜಲ ಹಾಗೂ ಸಣ್ಣಪುಟ್ಟ ಪ್ರಮಾಣದಲ್ಲಿ ಭೂಕುಸಿತ ಉಂಟಾಗುತ್ತಿದೆ. ಹೀಗಾಗಿ ಇಲ್ಲಿನ ಜನರು 2018ರ ಕರಾಳ ದಿನಗಳು ಮತ್ತೆ ಮರುಕಳಿಸುತ್ತಾ ಅನ್ನೋ ಆತಂಕದಲ್ಲೇ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ ಪಿಡಿಒ ವರ್ಗಾವಣೆ ಪ್ರಕ್ರಿಯೆ: ಪ್ರಿಯಾಂಕ್ ಖರ್ಗೆ