ಮಡಿಕೇರಿ: ದಕ್ಷಿಣ ಕನ್ನಡ – ಕೊಡಗು ಗಡಿ ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಮಡಿಕೇರಿ ತಾಲ್ಲೂಕಿನ ಜೇಡಿಗುಂಡಿ–ಅತ್ಯಾಡಿ ರಸ್ತೆ ವ್ಯಾಪ್ತಿಯಲ್ಲಿ ಭೂಕುಸಿತದ ಭೀತಿ ಹೆಚ್ಚಾಗಿದೆ.
ನಾಲ್ಕು ದಿನಗಳ ಹಿಂದೆ ಸಂಭವಿಸಿದ್ದ ಭೂಕುಸಿತದಿಂದ ರಸ್ತೆಯೇ ಮಾಯವಾಗಿದೆ. ಸ್ಥಳೀಯ ಆಡಳಿತ ಮತ್ತು ಗ್ರಾಮಸ್ಥರು ಸೇರಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ, ಬೆಟ್ಟದ ಮೇಲ್ಭಾಗದಲ್ಲಿ ಇನ್ನೂ ಬಿರುಕುಗಳು ಕಾಣಿಸಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಮತ್ತೆ ಭೂಕುಸಿತ ಸಂಭವಿಸುವ ಆತಂಕ ಕಾಡುತ್ತಿದೆ. ಇದನ್ನೂ ಓದಿ: ಬೈಕ್ ಸವಾರನ ಮೇಲೆ ದರ್ಪ ಆರೋಪ – ಮಾಲೂರು ಜೆಎಂಎಫ್‌ಸಿ ನ್ಯಾಯಾಧೀಶೆ ವರ್ಗಾವಣೆ


ಈ ಮಾರ್ಗದಲ್ಲೇ ಶಾಲಾ ಮಕ್ಕಳು ಜೀಪ್‌ಗಳಲ್ಲಿ ಸಂಚರಿಸುತ್ತಿದ್ದು, ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ. ಬೆಟ್ಟದಿಂದ ಯಾವಾಗ ಮಣ್ಣು ಅಥವಾ ಬಂಡೆಗಳು ಕುಸಿಯುತ್ತವೆಯೋ ಎಂಬ ಭಯದಲ್ಲೇ ಪ್ರತಿದಿನ ಪ್ರಯಾಣಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದನ್ನೂ ಓದಿ: ಮುಳ್ಳಯ್ಯನಗಿರಿ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ – ಕೂದಲೆಳೆ ಅಂತರದಲ್ಲಿ ಪ್ರವಾಸಿಗ ಬಚಾವ್

ಅತ್ಯಾಡಿ ಸೇರಿದಂತೆ ಹಲವು ಗ್ರಾಮಗಳಿಗೆ ಇದೇ ರಸ್ತೆ ಪ್ರಮುಖ ಸಂಪರ್ಕ ಮಾರ್ಗವಾಗಿದ್ದು, ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಜೀಪ್‌ಗಳನ್ನೇ ಅವಲಂಬಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೆ ಭೂಕುಸಿತ ಸಂಭವಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೆಲಮಂಗಲ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ – ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನ

