CinemaLatestMain PostSandalwood

ಸಲ್ಮಾನ್ ಖಾನ್ ಜೊತೆ ತಂದೆಯನ್ನೂ ಕೊಲ್ಲುವ ಬೆದರಿಕೆ : ಎಫ್.ಐ.ಆರ್ ದಾಖಲು, ಹೆಚ್ಚಿದ ಭದ್ರತೆ

Advertisements

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್‌ಖಾನ್ ಮತ್ತು ಅವರ ತಂದೆ ನಿರ್ಮಾಪಕ ಹಾಗೂ ಚಿತ್ರಕಥೆಗಾರ  ಸಲೀಂಖಾನ್‌ಗೆ ಜೀವ ಬೆದರಿಕೆ ಹಿನ್ನಲೆ ಮಹಾರಾಷ್ಟ್ರ ಗೃಹ ಇಲಾಖೆ ಭದ್ರತೆಯನ್ನು ಹೆಚ್ಚು ಮಾಡಿದೆ. ಬಾಂದ್ರಾ ಪೊಲೀಸರು ಈಗಾಗಲೇ ದೂರು ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.  ಇದನ್ನು ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

ಸಲ್ಮಾನ್ ಖಾನ್ ಅವರ ಒಟ್ಟಾರೆ ಭದ್ರತೆಯನ್ನು ಹೆಚ್ಚಿಸಿದ್ದೇವೆ, ರಾಜಸ್ಥಾನದ ಗ್ಯಾಂಗ್‌ನಿಂದ ಯಾವುದೇ ಅನೈತಿಕ ಚಟುವಟಿಕೆ ನಡೆಯದಂತೆ ನೋಡಿಕೊಳ್ಳಲು ಪೊಲೀಸರು ಆತನ ಅಪಾರ್ಟ್‌ಮೆಂಟ್‌ನ ಸುತ್ತಲೂ ಇರುತ್ತಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನೂ ಓದಿ : ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

ಭಾನುವಾರ ಸಲೀಂಖಾನ್ ಬೆಳಗಿನ ವಾಕ್ ಮುಗಿಸಿ ಬ್ಯಾಂಡ್‌ಸ್ಟ್ಯಾಂಡ್‌ನಲ್ಲಿ ಬೆಂಚ್ ಮೇಲೆ ಕುಳಿತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡುವ ಬೆದರಿಕೆ ಪತ್ರವನ್ನು ನೀಡಿದ್ದರು. ಬಳಿಕ ಸಲೀಂಖಾನ್ ತಮ್ಮ ಭದ್ರತಾ ಸಿಬ್ಬಂದಿಯ ಜೊತೆಗೆ ಪೊಲೀಸರನ್ನು ಸಂಪರ್ಕಿಸಿ, ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 506-II (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದನ್ನೂ ಓದಿ: ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ಕಮಲ್ ಹಾಸನ್ ನಟನೆಯ `ವಿಕ್ರಮ್’ ಚಿತ್ರ

salman khan

ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಪ್ರಮುಖ ಆರೋಪಿಯಾಗಿ ಹೊರಹೊಮ್ಮಿದ ನಂತರ ಸಲ್ಮಾನ್ ಭದ್ರತೆಯನ್ನು ಹೆಚ್ಚಿಸಲಾಗಿದೆ. 2018 ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಬಿಷ್ಣೋಯ್ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಿದ್ದರು. ಈಗ ಸಿಧು ಮೂಸ್ ವಾಲಾ ಬಳಿಕ ಸಲ್ಮಾನ್ ಖಾನ್ ಹತ್ಯೆಯ ಬೆದರಿಕೆ ಪತ್ರ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published.

Back to top button