ನವದೆಹಲಿ: ಫೆಬ್ರವರಿ 14 ದಿನಾಂಕ ಹೇಳಿದ ತಕ್ಷಣ ಅದು ಪ್ರೇಮಿಗಳ ದಿನ (Valentine’s Day) ಎಂಬುದು ಪ್ರತಿಯೊಬ್ಬರಿಗೂ ನೆನಪಾಗುತ್ತದೆ. ಈ ನಡುವೆ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ (Animal Welfare Board) ಒಂದು ಹೊಸ ನೋಟಿಸ್ ಅನ್ನು ಬಿಡುಗಡೆ ಮಾಡಿದೆ. ಈ ದಿನ ದನಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ (Cow Hug Day) ಆಚರಿಸಿ ಎಂದು ಕರೆ ನೀಡಿದೆ.
ಹೌದು, ಫೆಬ್ರವರಿ 14ರಂದು ವಿಶ್ವದೆಲ್ಲೆಡೆ ಪ್ರೇಮಿಗಳ ದಿನವನ್ನಾಗಿ ಆಚರಿಸಿದರೆ, ಭಾರತದಲ್ಲಿ ದನವನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಲು ಮಂಡಳಿ ಕರೆ ನೀಡಿದೆ. ಈ ಮೂಲಕ ಹಸುಗಳನ್ನು ಹೊಂದುವುದರಿಂದಾಗುವ ಅನುಕೂಲ, ಅದು ರಾಷ್ಟ್ರದ ಆರ್ಥಿಕತೆಗೆ ಹೇಗೆ ಸಹಾಯ ಮಾಡುತ್ತದೆ ಎಂಬುದರ ಬಗ್ಗೆ ತಿಳಿಸಲು ಮುಂದಾಗಿದೆ.
Advertisement
Advertisement
Advertisement
ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ಎಲ್ಲರಿಗೂ ತಿಳಿದಿದೆ. ಇವು ಪಶು ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪ್ರತಿನಿಧಿಸುತ್ತದೆ ಮಾತ್ರವಲ್ಲದೇ ನಮ್ಮ ಜೀವನವನ್ನು ಉಳಿಸಿಕೊಳ್ಳುತ್ತದೆ. ತಾಯಿಯಂತೆ ಪೋಷಿಸುವ ಸ್ವಭಾವ ಹೊಂದಿರುವ ಇವುಗಳನ್ನು ‘ಕಾಮಧೇನು’ ಹಾಗೂ ‘ಗೋಮಾತೆ’ ಎಂದು ಕರೆಯಲಾಗುತ್ತದೆ. ಇದನ್ನೂ ಓದಿ: ಹೊಲದಲ್ಲಿ ಟ್ರ್ಯಾಕ್ಟರ್ ಓಡಿಸಿದ ಧೋನಿ
Advertisement
ಈ ಬಗ್ಗೆ ವಿವರಿಸಿರುವ ಪ್ರಾಣಿ ಕಲ್ಯಾಣ ಮಂಡಳಿ, ಈ ನಮ್ಮ ಸಂಪ್ರದಾಯಗಳ ಅಳಿವಿಗೆ ಪಾಶ್ಚಿಮಾತ್ಯ ಸಂಸ್ಕೃತಿಯೇ ಕಾರಣ. ಇದಕ್ಕಾಗಿ ಭಾವನಾತ್ಮಕ ಶ್ರೀಮಂತಿಕೆ, ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಹೆಚ್ಚಿಸಲು ಜನರು ಹಸುಗಳನ್ನು ತಬ್ಬಿಕೊಳ್ಳುವಂತೆ ಪ್ರೋತ್ಸಾಹಿಸಲಾಗುತ್ತಿದೆ ಎಂದಿದೆ.
ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದಾಗಿ ಈ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಬಿಡುವಂತೆ ಮಾಡಿದೆ. ಹೀಗಾಗಿ ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಹಸುವನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಬಹುದು. ಇದರಿಂದ ಸಂತೋಷ ಮತ್ತು ಧನಾತ್ಮಕ ಶಕ್ತಿ ತುಂಬಿದ ಜೀವನವನ್ನು ರಚಿಸಲು ಸಾಧ್ಯವಾಗುತ್ತದೆ ಎಂದು ಪ್ರಾಣಿ ಕಲ್ಯಾಣ ಮಂಡಳಿ ತನ್ನ ನೋಟಿಸ್ನಲ್ಲಿ ತಿಳಿಸಿದೆ. ಇದನ್ನೂ ಓದಿ: ಮದುವೆ ನಂತರ ಮೊದಲ ಬಾರಿಗೆ ಕ್ಯಾಮರಾ ಕಣ್ಣಿಗೆ ಕಾಣಿಸಿಕೊಂಡ ಸಿದ್-ಕಿಯಾರಾ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k