ಶಿವಮೊಗ್ಗ : ಬೆಂಗಳೂರಿನಲ್ಲಿ ಫೆ.26 ರಿಂದ ಮಾ.4ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ತಿಳಿಸಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಈಗಾಗಲೇ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಈ ಚಲನಚಿತ್ರೋತ್ಸವದಲ್ಲಿ 50 ದೇಶಗಳ ಸುಮಾರು 150 ಚಿತ್ರಗಳು ಹಾಗೂ ಕನ್ನಡದ 32 ಚಿತ್ರಗಳು ಪ್ರದರ್ಶನಗೊಳ್ಳಲಿದೆ ಎಂದರು.
Advertisement
Advertisement
ಕಂಠೀರವ ಸ್ಟುಡಿಯೋದಲ್ಲಿ ಕಾರ್ಯಕ್ರಮ ಉದ್ಘಾಟನೆ ಆಗಲಿದ್ದು, ಕಂಠೀರವ ಸ್ಟುಡಿಯೋ ಹಾಗೂ ಒರಾಯನ್ ಮಾಲ್ ನಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದೆ. ಈ ಚಲನಚಿತ್ರೋತ್ಸವದಲ್ಲಿ ರಾಷ್ಟ್ರದ ಪ್ರಮುಖ ನಿರ್ದೇಶಕರು, ನಟರು, ತಂತ್ರಜ್ಞರು ಸೇರಿದಂತೆ ವಿದೇಶದಿಂದಲೂ ನಿರ್ದೇಶಕರು, ತಂತ್ರಜ್ಞರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
Advertisement
ಅಲ್ಲದೇ ಅಕಾಡೆಮಿ ಪ್ರಶಸ್ತಿಗಳು ಘೋಷಣೆ ಮಾಡುವುದು ಹಾಗೂ ಸಿನಿಮಾಗೆ ಸಬ್ಸಿಡಿ ನೀಡುವ ಕಾರ್ಯ ವಾರ್ತಾ ಇಲಾಖೆ ಬಳಿ ಇದೆ. ಆದರೆ ಇದನ್ನು ಚಲನಚಿತ್ರ ಅಕಾಡೆಮಿಗೆ ವಹಿಸಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಹೀಗಾಗಿ ಚಲನಚಿತ್ರಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳು ಅಕಾಡೆಮಿ ಮೂಲಕ ನಡೆಯಬೇಕು ಎಂಬುದು ಎಲ್ಲರ ಆಶಯವಾಗಿದೆ. ಜೊತೆಗೆ ಅಕಾಡೆಮಿ ಸಹ ಇದರಲ್ಲಿ ಯಶಸ್ವಿಯಾಗುತ್ತದೆ ಎಂದು ಸುನಿಲ್ ಪುರಾಣಿಕ್ ತಿಳಿಸಿದರು.