ಮುಂಬೈ: ನಾವು 25 ವರ್ಷಗಳ ಕಾಲ ಹಾವಿಗೆ ಆಹಾರ ನೀಡಿದ್ದೇವೆ. ಈಗ ಅದೇ ಹಾವು ನಮ್ಮನ್ನು ಕುಕ್ಕುತ್ತಿದೆ. ಆದರೆ ಈ ಹಾವನ್ನು ಹೇಗೆ ತುಳಿಯಬೇಕೆಂದು ನಮಗೆ ತಿಳಿದಿದೆ. ನಮ್ಮ ಮೇಲೆ ಆರೋಪ ಹೊರಿಸುವವರ ವಿರುದ್ಧ ತಲೆ ಎತ್ತಲು ನಾವು ಸಿದ್ಧರಿದ್ದೇವೆ ಎಂದು ಬಿಜೆಪಿ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಿಡಿಕಾರಿದ್ದಾರೆ.
Advertisement
ರಾಜ್ಯ ಬಜೆಟ್ ಅಧಿವೇಶನಕ್ಕೂ ಮುನ್ನ ಮುಂಬೈನಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಶಾಸಕರು ಮತ್ತು ಮುಖಂಡರ ಜಂಟಿ ಸಭೆ ನಡೆಸಿದ ಉದ್ಧವ್ ಠಾಕ್ರೆ ಅವರು ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಇನ್ನೂ ಈ ಸಭೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‍ಸಿಪಿ) ಮುಖ್ಯಸ್ಥ ಶರದ್ ಪವಾರ್ ಕೂಡ ಉಪಸ್ಥಿತರಿದ್ದರು. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ
Advertisement
Advertisement
Advertisement
ಕಳೆದ ಬಾರಿ ಬೆನ್ನುಹುರಿಯ ಶಸ್ತ್ರಚಿಕಿತ್ಸೆಯ ನಂತರ ಆರೋಗ್ಯ ಸಮಸ್ಯೆಗಳ ಕಾರಣ ಅಧಿವೇಶನದಲ್ಲಿ ಉದ್ಧವ್ ಠಾಕ್ರೆ ಅವರು ಪಾಲ್ಗೊಂಡಿರಲಿಲ್ಲ. ಆದರೆ ಈ ಬಾರಿ ಬಜೆಟ್ ಅಧಿವೇಶನದಲ್ಲಿ ಶೇ.100ರಷ್ಟು ಕಡ್ಡಾಯವಾಗಿ ಹಾಜರಾಗಬೇಕು ಎಂದು ಶಾಸಕರಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನಾನು ಮತ್ತೆ ಅಧ್ಯಕ್ಷನಾಗಿದ್ದರೆ ರಷ್ಯಾ-ಉಕ್ರೇನ್ ಯುದ್ಧ ನಡೆಯುತ್ತಿರಲಿಲ್ಲ: ಟ್ರಂಪ್
ಇದೇ ವೇಳೆ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿರುವುದನ್ನು ಉಲ್ಲೇಖಿಸಿ ನನ್ನ ರಾಜಕೀಯ ಜೀವನದಲ್ಲಿ ಇಂತಹ ಪ್ರತೀಕಾರದ ಕೇಂದ್ರ ಸರ್ಕಾರವನ್ನು ನಾನು ಎಂದಿಗೂ ನೋಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ನವಾಬ್ ಮಲಿಕ್ ಬಂಧನದ ಬಳಿಕ ಮಮತಾ ಬ್ಯಾನರ್ಜಿ ಅವರು ತಮಗೆ ಕರೆ ಮಾಡಿ ತಮ್ಮ ಪಕ್ಷದ ನಾಲ್ವರು ಸಹೋದ್ಯೋಗಿಗಳನ್ನು ಜೈಲಿಗೆ ಹಾಕಿದ್ದು, ಈ ವಿಚಾರವಾಗಿ ಎಲ್ಲರೂ ಹೋರಾಡಲು ಒಂದಾಗಬೇಕು. ಇದರಿಂದ ಬಿಜೆಪಿ ಅವರನ್ನು ಸೋಲಿಸಬಹುದು ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.