– ಪಂಜಾಬ್ ಸಿಎಂ ಭಗವಂತ್ ಮಾನ್ ಸಾಥ್
ಅಯೋಧ್ಯೆ (ಉತ್ತರ ಪ್ರದೇಶ): ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಕುಟುಂಬ ಸಮೇತರಾಗಿ ಅಯೋಧ್ಯೆಯ (Ayodhya) ಐತಿಹಾಸಿಕ ರಾಮಮಂದಿರಕ್ಕೆ (Ram Mandir) ಭೇಟಿ ನೀಡಿ ಭಗವಾನ್ ರಾಮಲಲ್ಲಾನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
Advertisement
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಭವ್ಯ ದೇವಾಲಯಕ್ಕೆ ಇಂದು (ಸೋಮವಾರ) ಭೇಟಿ ನೀಡಿದರು. ಉಭಯ ನಾಯಕರ ಕುಟುಂಬದವರೂ ಜೊತೆಗಿದ್ದರು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಶಿಫಾರಸು
Advertisement
Advertisement
ರಾಮಲಲ್ಲಾಗೆ ಪ್ರಾರ್ಥನೆ ಸಲ್ಲಿಸಿದ ನಂತರ ನಾನು ವರ್ಣಿಸಲಾಗದ ಶಾಂತತೆಯನ್ನು ಅನುಭವಿಸಿದೆ. ಪ್ರತಿದಿನ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ಜನರ ಪ್ರೀತಿ ಮತ್ತು ಭಕ್ತಿಯನ್ನು ನೋಡುವುದು ನಿಜಕ್ಕೂ ಹೃದಯಸ್ಪರ್ಶಿಯಾಗಿದೆ. ಎಲ್ಲರ ಒಳಿತಿಗಾಗಿ ನಾನು ಪ್ರಾರ್ಥಿಸಿದ್ದೇನೆ ಎಂದು ಸಿಎಂ ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
Advertisement
ರಾಮಲಲ್ಲಾನ ದರ್ಶನ ಪಡೆಯುವುದು ನನ್ನ ಬಹುದಿನಗಳ ಆಸೆಯಾಗಿತ್ತು. ದೇಶದ ಕ್ಷೇಮಕ್ಕಾಗಿ ಪ್ರಾರ್ಥಿಸಿದ್ದೇನೆ ಎಂದು ಪಂಜಾಬ್ ಸಿಎಂ ಮಾನ್ ಹೇಳಿದ್ದಾರೆ. ಇದನ್ನೂ ಓದಿ: ʻದೆಹಲಿ ಚಲೋʼ ಪ್ರತಿಭಟಗೆ ತೆರಳುತ್ತಿದ್ದ ರಾಜ್ಯದ 100ಕ್ಕೂ ಹೆಚ್ಚು ರೈತರು ಪೊಲೀಸ್ ವಶಕ್ಕೆ
ಅಯೋಧ್ಯೆಯ ದೇವಾಲಯದಲ್ಲಿ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನೆ’ ಜ.22 ರಂದು ನೆರವೇರಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಶಾಸ್ತ್ರೋಕ್ತವಾಗಿ ನಡೆದಿತ್ತು.